



ಬೆಂಗಳೂರು: ಬಿಜೆಪಿ ಅಭ್ಯರ್ಥಿಗಳ ಮೊದಲ ಪಟ್ಟಿ ಇಂದು (ಏ.10) ರಂದು ಬಿಡುಗಡೆಯಾಗುವ ಸಾಧ್ಯತೆಯಿದೆ.
ನಿನ್ನೆ (ಏ.9) ಅಭ್ಯರ್ಥಿಗಳನ್ನು ಅಂತಿಮಗೊಳಿಸಲು 2 ಗಂಟೆ ಪ್ರಧಾನಿ ಮೋದಿ ಅವರ ನೇತೃತ್ವದಲ್ಲಿ ಸಭೆ ನಡೆಸಲಾಗಿತ್ತು. ಆದರೆ ಸುದೀರ್ಘ ಚರ್ಚೆ ನಡೆದರೂ ಪಟ್ಟಿ ಅಂತಿಮಗೊಳಿಸೋಕೆ ಆಗಿರಲಿಲ್ಲ.
ಇಂದು ಹೈಕಮಾಂಡ್ ವರಿಷ್ಠರ ಕೆಲ ಸಲಹೆ ಸೂಚನೆ ಮೇರೆಗೆ ಮತ್ತೆ ಸಭೆ ನಡೆಸಿ. ಅಂತಿಮ ತೀರ್ಮಾನ ಕೈಗೊಳ್ಳಲಾಗುತ್ತದೆ ಎನ್ನಲಾಗಿದೆ.
10-15 ಮಂದಿಗೆ ಟಿಕೆಟ್ ಮಿಸ್ ಆಗುವ ಸಾಧ್ಯತೆಯಿದ್ದು, ಸಿಎಂ ಬಸವರಾಜ ಬೊಮ್ಮಾಯಿ ಸೇರಿದಂತೆ 30 ಶಾಸಕರ ಟಿಕೆಟ್ ಸಮಿತಿಯಲ್ಲಿ ಚರ್ಚೆಯಿಲ್ಲದೇ ಫೈನಲ್ ಆಗುತ್ತದೆ ಎನ್ನಲಾಗಿದೆ.
ಸಭೆಯಲ್ಲಿ ಬಹುತೇಕ ಹಾಲಿ ಸಚಿವರಿಗೆ ಮತ್ತೆ ಟಿಕೆಟ್ ನೀಡಲು ನಿರ್ಧರಿಸಲಾಗಿದ್ದು, ಬಿ.ವೈ. ವಿಜಯೇಂದ್ರಗೆ ಶಿಕಾರಿಪುರ ಟಿಕೆಟ್ ಕೊಡಲು ಹೈಕಮಾಂಡ್ ಒಪ್ಪಿಗೆ ನೀಡಿದೆ. ಇಂದು ಮತ್ತೊಂದು ಸುತ್ತಿನ ಸಭೆ ನಡೆಸಿದ ಬಳಿಕ ಟಿಕೆಟ್ ಘೋಷಣೆಗೆ ತೀರ್ಮಾನ ಮಾಡಲಾಗುತ್ತದೆ.
ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.
© 2021 Suddi Sanchalana. All Rights Reserved.