



ಕಾರ್ಕಳ: ಕಾರ್ಕಳವನ್ನು ಪ್ರವಾಸೋದ್ಯಮವಾಗಿ ಮತ್ತಷ್ಟು ಪ್ರಸಿದ್ಧಿಗೆ ತರುವ ನಿಟ್ಟಿನಲ್ಲಿ, ಕಾರ್ಕಳದ ಬೈಲೂರು-ಯರ್ಲಪಾಡಿಯ ಉಮಿಕಲ್ ಕುಂಜದಲ್ಲಿ ನಿರ್ಮಿಸಲಾದ ಪರಶುರಾಮ ಥೀಮ್ ಪಾರ್ಕ್ ಲೋಕಾರ್ಪಣೆ ಕಾರ್ಯಕ್ರಮವನ್ನು ಯಶಸ್ವಿಗೊಳಿಸಲು ಸರ್ವರ ಸಹಭಾಗಿತ್ವತೆಯು ಬಹುಮುಖ್ಯ ಪಾತ್ರಹೊಂದುತ್ತದೆ ಎಂದು ಇಂಧನ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವರಾದ ವಿ ಸುನಿಲ್ ಕುಮಾರ್ ಕಾರ್ಕಳದ ವಿವಿಧ ಇಲಾಖಾ ಅಧಿಕಾರಿಗಳು ಹಾಗೂ ಪ್ರಮುಖರೊಂದಿಗೆ ಸೋಮವಾರದಂದು ನಡೆದ ಪೂರ್ವಭಾವಿ ಸಭೆಯಲ್ಲಿ ತಿಳಿಸಿದರು. ಪರಶುರಾಮ ಥೀಮ್ ಪಾರ್ಕ್ ಲೋಕಾರ್ಪಣೆ ಸಮಾರಂಭದ ಹಿನ್ನೆಲೆಯಲ್ಲಿ ಕಾರ್ಕಳದ ಜನಸೇವಾ ಕಚೇರಿ ವಿಕಾಸದಲ್ಲಿ ನಡೆದ ಪೂರ್ವಭಾವಿ ಸಭೆಯಲ್ಲಿ ಮಾತನಾಡಿ, ಜ. 27,28,29 ರವರೆಗೆ ನಡೆಯುವ ಕಾರ್ಯಕ್ರಮವು ಅತ್ಯಂತ ಅದ್ಧೂರಿಯಾಗಿ, ಅಚ್ಚುಕಟ್ಟಾಗಿ ನಡೆಸುವ ನಿಟ್ಟಿನಲ್ಲಿ ಕಾರ್ಕಳ ಉತ್ಸವವನ್ನು ಉಲ್ಲೇಖಿಸುತ್ತಾ, ಅಂದು ಕಾರ್ಯನಿರ್ವಹಿಸಿದಂತೆಯೇ ಈ ಬಾರಿ ಅದೇ ಉತ್ಸಾಹದಿಂದ ಎಲ್ಲರೂ ಕಾರ್ಯನಿರ್ವಹಿಸಬೇಕಿದೆ ಎಂದರು. ಕಾರ್ಕಳ ತಹಶೀಲ್ದಾರ್ ಪ್ರದೀಪ್ ಕುರ್ಡೇಕರ್, ಹೆಬ್ರಿ ತಹಶೀಲ್ದಾರ್ ಕೆ. ಪುರಂದರ್, ಕನ್ನಡ ಸಂಸ್ಕೃತಿ ಇಲಾಖೆ ಉಡುಪಿ ಜಿಲ್ಲೆಯ ಸಹಾಯಕ ನಿರ್ದೇಶಕಿ ಶ್ರೀಮತಿ ಪೂರ್ಣಿಮಾ, ಡಿವೈಎಸ್‌ಪಿ ವಿಜಯ ಪ್ರಸಾದ್, ಉಭಯ ತಾ.ಪಂ. ಇ.ಒ.ಗಳಾದ ಗುರುದತ್ ಎಂ.ಎನ್., ಶಶಿಧರ್, ವಲಯ ಅರಣ್ಯಾಧಿಕಾರಿ ಪ್ರಭಾಕರ್, ಬಿಜೆಪಿ ಕ್ಷೇತ್ರಾಧ್ಯಕ್ಷ ಮಹಾವೀರ ಹೆಗ್ಡೆ ವೇದಿಕೆಯಲ್ಲಿ ಉಪಸ್ಥಿತರಿದ್ದರು. ನವೀನ್ ನಾಯಕ್ ಕಾರ್ಯಕ್ರಮ ನಿರ್ವಹಿಸಿದರು.
ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.
© 2021 Suddi Sanchalana. All Rights Reserved.