



ಮಂಗಳೂರು: ಸಹಕಾರಿ ಬ್ಯಾಂಕಿಂಗ್ ಕ್ಷೇತ್ರದಲ್ಲಿ ಗಣನೀಯ ಪ್ರಗತಿ ಕಂಡಿರುವ ದ.ಕ. ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ( ಎಸ್ ಸಿಡಿಸಿಸಿ ಬ್ಯಾಂಕ್) ನ ನೂತನ ಎಟಿಎಂ ಕೇಂದ್ರ ಬೆಳುವಾಯಿಯಲ್ಲಿ ಜೂ.20 ರಂದು ಬೆಳಿಗ್ಗೆ 11ಕ್ಕೆ ಉದ್ಘಾಟನೆಗೊಳ್ಳಲಿದೆ. ಗ್ರಾಹಕರ ಬಹುದಿನಗಳ ಬೇಡಿಕೆಗೆ ಸ್ಪಂದಿಸಿ ಬೆಳುವಾಯಿ ಶಾಖಾ ಕಟ್ಟಡದಲ್ಲಿ ಹೊಸ ಎಟಿಎಂ ಕೇಂದ್ರವನ್ನು ಬ್ಯಾಂಕ್ ನಿರ್ಮಿಸಿದೆ. ಇದು ಎಸ್ ಸಿಡಿಸಿಸಿ ಬ್ಯಾಂಕಿನ 9ನೇ ಎಟಿಎಂ ಕೇಂದ್ರವಾಗಿದ್ದು ಶಾಸಕ ಉಮಾನಾಥ ಎ. ಕೋಟ್ಯಾನ್ ಉದ್ಘಾಟಿಸಲಿರುವರು.
ಎಸ್ ಸಿಡಿಸಿಸಿ ಬ್ಯಾಂಕಿನ ಅಧ್ಯಕ್ಷ ಡಾ|ಎಂ. ಎನ್.ರಾಜೇಂದ್ರ ಕುಮಾರ್ ಅಧ್ಯಕ್ಷತೆ ವಹಿಸಲಿದ್ದಾರೆ. ಬ್ಯಾಂಕಿನ ನಿರ್ದೇಶಕ ಹಾಗೂ ಬೆಳುವಾಯಿ ಸಹಕಾರಿ ವ್ಯವಸಾಯಿಕ ಸಂಘದ ಅಧ್ಯಕ್ಷ ಭಾಸ್ಕರ್ ಎಸ್. ಕೋಟ್ಯಾನ್ ಪಾಲ್ಗೊಳ್ಳಲಿರುವರು.
ಬೆಳುವಾಯಿ ಆದ್ಯಲಕ್ಷ್ಮೀ ಕಾಂಪ್ಲೆಕ್ಸ್ ನಲ್ಲಿರುವ ತನ್ನ ಶಾಖಾ ಕಟ್ಟಡದಲ್ಲಿ ಹೊಸ ಎಟಿಎಂ ಕೇಂದ್ರದ ಉದ್ಘಾಟನ ಸಮಾರಂಭ ನಡೆಯಲಿದೆ.
109 ವರ್ಷಗಳ ಸಾರ್ಥಕ ಸೇವೆಯ ಇತಿಹಾಸ ಹೊಂದಿರುವ ಎಸ್ ಸಿಡಿಸಿಸಿ ಬ್ಯಾಂಕ್ ನಗರ ಹಾಗೂ ಗ್ರಾಮಾಂತರ ಪ್ರದೇಶಗಳಲ್ಲಿ ಉತ್ಕೃಷ್ಟ ಬ್ಯಾಂಕಿಂಗ್ ಸೇವೆ ನೀಡುತ್ತಿದೆ ಎಂದು ಪ್ರಕಟಣೆ ತಿಳಿಸಿದೆ.
ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.
© 2021 Suddi Sanchalana. All Rights Reserved.