


ಪೆರ್ಡೂರು: ಇಲ್ಲಿನ ಸಾಂತ್ಯಾರ್‌ನಲ್ಲಿ ನೂತನವಾಗಿ ಸ್ಥಾಪಿಸಲಾಗಿರುವ ‘ಶಕ್ತಿ ಫ್ಯಾಬ್ ಟೆಕ್’ ಸಂಸ್ಥೆಯ ಉದ್ಘಾಟನಾ ಸಮಾರಂಭ ಸೆ.26ರಂದು ಬೆಳಗ್ಗೆ 10.30ಕ್ಕೆ ನಡೆಯಲಿದೆ. ಕುಕ್ಕೆ ಸುಬ್ರಹ್ಮಣ್ಯ ಶ್ರೀ ಮಠದ ಶ್ರೀ ಶ್ರೀ ವಿದ್ಯಾವಾಚಸ್ಪತಿ ವಿದ್ಯಾಪ್ರಸನ್ನ ತೀರ್ಥ ಶ್ರೀಪಾದರ ದಿವ್ಯ ಹಸ್ತದಿಂದ ದೀಪಾರತಿ ಬೆಳಗಿಸಿ ಆಶೀರ್ವಾದ ನೆರವೇರಲಿದ್ದು, ವಿವಿಧ ಕ್ಷೇತ್ರಗಳ ಗಣ್ಯರು ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದಾರೆ.
ಕಾಪು ಶಾಸಕ ಗುರ್ಮೆ ಸುರೇಶ್ ಶೆಟ್ಟಿ, ಗೌರಿಬಿದನೂರು ಶಾಸಕ ಕೆ.ಎಚ್. ಪುಟ್ಟಸ್ವಾಮಿ ಗೌಡ, ಮಾಜಿ ಸಚಿವರಾದ ವಿನಯ್ ಕುಮಾರ್ ಸೊರಕೆ ಹಾಗೂ ನಾಗೇಶ್ ಹೆಚ್. ಬೆಂಗಳೂರು, ಮೆಸ್ಕಾಂ ತಾಂತ್ರಿಕ ನಿರ್ದೇಶಕ ಹರೀಶ್ ಕುಮಾರ್ ವಿ., ಉಡುಪಿ ಜಿಲ್ಲಾ ಕೈಗಾರಿಕಾ ಕೇಂದ್ರದ ಜಂಟಿ ನಿರ್ದೇಶಕ ನಾಗರಾಜ್ ನಾಯಕ್ ಸೇರಿದಂತೆ ಗಣ್ಯರು ಉಪಸ್ಥಿತರಿರುವರು.
ನಿವೃತ್ತ ಐಎಎಸ್ ಅಧಿಕಾರಿ ಬಿ. ಸದಾಶಿವ ಪ್ರಭು, ಕ್ಯಾಂಪ್ಕೊ ಮಂಗಳೂರು ಅಧ್ಯಕ್ಷ ಎಸ್.ಆರ್. ಸತೀಶ್‌ಚಂದ್ರ, ಉಜ್ವಲ್ ಗ್ರೂಪ್ಸ್ ವ್ಯವಸ್ಥಾಪಕ ನಿರ್ದೇಶಕ ಪಿ. ಪುರುಷೋತ್ತಮ ಶೆಟ್ಟಿ, ಉದ್ಯಮಿಗಳಾದ ಟಿ. ಸಚಿನ್ ಪೈ ಹಾಗೂ ನಿತಿನ್ ಕೊಪಿಕರ್ ಅವರು ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ.

ಶ್ರೀ ಕ್ಷೇತ್ರ ಕಲ್ಲಂಗಳದ ನಾಗಪಾತ್ರಿ ಬಿ.ಎನ್. ರಾಮಚಂದ್ರ ಕುಂಜ್ಜಿತ್ತಾಯರವರ ಮಾರ್ಗದರ್ಶನ ಹಾಗೂ ಪ್ರೋತ್ಸಾಹದೊಂದಿಗೆ ಶುಭಾಶೀರ್ವಾದ ಕಾರ್ಯಕ್ರಮ ಆಯೋಜಿಸಲಾಗಿದೆ. ಎಂದು ಸಂಸ್ಥೆಯ ಆಡಳಿತ ಪಾಲುದಾರ ವಾಸುದೇವ ನಾಯಕ್ ಭೈರಂಪಳ್ಳಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.
© 2021 Suddi Sanchalana. All Rights Reserved.