



ಉಡುಪಿ: ಉಡುಪಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧೀನದಲ್ಲಿರುವ ಉಡುಪಿ ಪತ್ರಿಕಾ ಭವನದ ನೂತನ ಉಪಹಾರ ಭವನದ ಉದ್ಘಾಟನೆ ಅ.30ರಂದು ನಡೆಯಿತು.
ಉಡುಪಿ ಶಾಸಕ ಯಶ್‌ಪಾಲ್ ಸುವರ್ಣ ಉಪಹಾರ ಭವನವನ್ನು ಉದ್ಘಾಟಿಸಿ ಶುಭ ಹಾರೈಸಿದರು. ಈ ಸಂದರ್ಭದಲ್ಲಿ ಸಂಘದ ಅಧ್ಯಕ್ಷ ರಾಜೇಶ್ ಶೆಟ್ಟಿ ಅಲೆವೂರು, ಪ್ರಧಾನ ಕಾರ್ಯದರ್ಶಿ ನಝೀರ್ ಪೊಲ್ಯ, ಕೋಶಾಧಿಕಾರಿ ಉಮೇಶ್ ಮಾರ್ಪಳ್ಳಿ, ಪತ್ರಿಕಾ ಭವನದ ಸಂಚಾಲಕ ಅಜಿತ್ ಆರಾಡಿ, ಸಹ ಸಂಚಾಲಕ ಅಂಕಿತ್ ಶೆಟ್ಟಿ, ಸಂಘದ ಮಾಜಿ ಅಧ್ಯಕ್ಷ ಜಯಕರ ಸುವರ್ಣ, ಶಶಿಧರ್ ಮಾಸ್ತಿಬೈಲು, ದೀಪಕ್ ಜೈನ್, ಮೈಕಲ್ ರೊಡ್ರಿಗಸ್ ಮೊದಲಾದವರು ಉಪಸ್ಥಿತರಿದ್ದರು. ಸಂಘದ ಕಾರ್ಯದರ್ಶಿ ರಹೀಂ ಉಜಿರೆ ಕಾರ್ಯಕ್ರಮ ನಿರೂಪಿಸಿದರು
ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.
© 2021 Suddi Sanchalana. All Rights Reserved.