



ಉಡುಪಿ : ಜಿಲ್ಲಾ ಪಂಚಾಯತ್ ಶಾಲಾ ಶಿಕ್ಷಣ ಹಾಗೂ ಸಾಕ್ಷರತಾ ಇಲಾಖೆ, ಉಡುಪಿ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ ಹಾಗೂ ಮಲ್ಪೆ ಆಂಗ್ಲ ಶ್ರೀ ನಾರಾಯಣಗುರು ಆಂಗ್ಲ ಮಾಧ್ಯಮ ಶಾಲೆಯ ಸಂಯುಕ್ತ ಆಶ್ರಯದಲ್ಲಿ ಉಡುಪಿ ವಲಯ ಮಟ್ಟದ ಪ್ರಾಥಮಿಕ ಹಾಗೂ ಪ್ರೌಢಶಾಲಾ ವಿದ್ಯಾರ್ಥಿಗಳ ಕ್ರೀಡಾಕೂಟವನ್ನು ಇಂದು ಅಜ್ಜರಕಾಡು ಜಿಲ್ಲಾ ಕ್ರೀಡಾಂಗಣದಲ್ಲಿ ಆಯೋಜಿಸಲಾಯಿತು. ಮಾಜಿ ಸಚಿವ ಪ್ರಮೋದ್ ಮಧ್ವರಾಜ್ ಕ್ರೀಡಾಕೂಟವನ್ನು ಉದ್ಘಾಟಿಸಿ, ಶುಭಹಾರೈಸಿದರು. ನಗರಸಭೆ ಅಧ್ಯಕ್ಷೆ ಸಮಿತ್ರಾ ನಾಯಕ್ , ಉಪಾಧ್ಯಕ್ಷೆ ಲಕ್ಷ್ಮೀ ಮಂಜುನಾಥ್, ಮೈಸೂರು ಎಲೆಕ್ಟ್ರಿಕಲ್ ಇಂಡಸ್ಟ್ರೀಸ್ ನ ಅಧ್ಯಕ್ಷ ಉದಯ ಕುಮಾರ್ ಶೆಟ್ಟಿ, ಮಲ್ಪೆ ಆಂಗ್ಲ ಮಾಧ್ಯಮ ಶಾಲಾ ಆಡಳಿತ ಮಂಡಳಿಯ ಅಧ್ಯಕ್ಷ ರಘುರಾಮ್ ಸುವರ್ಣ, ಕಾರ್ಯದರ್ಶಿ ಎಂ. ಲಕ್ಷ್ಮೀಶ ಬಂಗೇರ ಮೊದಲಾದವರು ಉಪಸ್ಥಿತರಿದ್ದರು.
ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.
© 2021 Suddi Sanchalana. All Rights Reserved.