logo
WhatsApp Image 2026-04-02 at 14.46.04.jpeg
hindalco everlast.jpeg

ಪ್ರತಿಷ್ಠಿತ ಸಂಸ್ಥೆಗಳಲ್ಲಿ ವ್ಯಾಸಾಂಗ ಮಾಡುತ್ತಿರುವ ಅಲ್ಪಸಂಖ್ಯಾತರ ವಿದ್ಯಾರ್ಥಿಗಳಿಗೆ ಪ್ರೋತ್ಸಾಹಧನ : ಅರ್ಜಿ ಆಹ್ವಾನ

ಟ್ರೆಂಡಿಂಗ್
share whatsappshare facebookshare telegram
5 Jul 2024
post image

ಉಡುಪಿ: ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಐ.ಐ.ಟಿ, ಐ.ಐ.ಐ.ಟಿ, ಎನ್.ಐ.ಟಿ, ಐ.ಐ.ಎಮ್, ಐ.ಐ.ಎಸ್.ಇ.ಆರ್, ಎ.ಐ.ಐ.ಎಮ್.ಎಸ್, ಎನ್.ಎಲ್.ಯು, ಐ.ಎನ್.ಐ ಮತ್ತು ಐ.ಯು.ಎಸ್.ಎಲ್.ಎ ಮುಂತಾದ ಪ್ರತಿಷ್ಠಿತ ಸಂಸ್ಥೆಗಳಲ್ಲಿ ವ್ಯಾಸಾಂಗ ಮಾಡುತ್ತಿರುವ ರಾಜ್ಯದ ಅಲ್ಪಸಂಖ್ಯಾತರ ಮುಸ್ಲಿಂ, ಕ್ರಿಶ್ಚಿಯನ್, ಜೈನ್, ಬೌದ್ಧ, ಪಾರ್ಸಿ ಹಾಗೂ ಸಿಖ್ ಸಮುದಾಯದ ವಿದ್ಯಾರ್ಥಿಗಳಿಂದ ಪ್ರೋತ್ಸಾಹಧನ ಸೌಲಭ್ಯ ಪಡೆಯಲು ಸೇವಾಸಿಂಧು ತಂತ್ರಾಂಶ https://sevasindhu.karnataka.gov.in/sevasindhu/DepartmentService ನಲ್ಲಿ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.

ಅರ್ಜಿ ಸಲ್ಲಿಸಲು ಆಗಸ್ಟ್ 31 ಕೊನೆಯ ದಿನ. ಹೆಚ್ಚಿನ ಮಾಹಿತಿಗಾಗಿ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಸಹಾಯವಾಣಿ ಸಂಖ್ಯೆ: 8277799990 ಅಥವಾ ಜಿಲ್ಲಾ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ, ಮೌಲಾನಾ ಆಜಾದ್ ಭವನ, ಅಲೆವೂರು ರಸ್ತೆ, ಮಣಿಪಾಲ, ಉಡುಪಿ ದೂ.ಸಂಖ್ಯೆ: 0820-2573596 ಅನ್ನು ಸಂಪರ್ಕಿಸಬಹುದಾಗಿದೆ ಎಂದು ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Aadya 26.jpg.jpeg
WhatsApp Image 2025-03-24 at 6.54.49 AM.jpeg
About Us

ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.

9900402699, 7899167180

© 2021 Suddi Sanchalana. All Rights Reserved.