logo
WhatsApp Image 2026-04-02 at 14.46.04.jpeg
hindalco everlast.jpeg

ಪ್ರೋತ್ಸಾಹಧನ - ಅರ್ಜಿ ಸಲ್ಲಿಕೆ : ಅವಧಿ ವಿಸ್ತರಣೆ

ಟ್ರೆಂಡಿಂಗ್
share whatsappshare facebookshare telegram
12 Dec 2025
post image

ಉಡುಪಿ: ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಐ.ಐ.ಟಿ, ಐ.ಐ.ಐ.ಟಿ, ಎನ್.ಐ.ಟಿ, ಐ.ಐ.ಎಮ್, ಐ.ಐ.ಎಸ್.ಇ.ಆರ್, ಎ.ಐ.ಐ.ಎಂ.ಎಸ್, ಎನ್.ಎಲ್.ಯು, ಐ.ಎನ್.ಐ ಮತ್ತು ಐ.ಯು.ಎಸ್.ಎಲ್.ಎ ಇತ್ಯಾದಿ ಸರ್ಕಾರದಿಂದ ಶಾಸನಬದ್ಧ ಅನುಮತಿ ಪಡೆದ ಪ್ರತಿಷ್ಠಿತ ಸಂಸ್ಥೆಗಳಲ್ಲಿ ವ್ಯಾಸಾಂಗ ಮಾಡುತ್ತಿರುವ ರಾಜ್ಯದ ಅಲ್ಪಸಂಖ್ಯಾತರ ಮುಸ್ಲಿಂ, ಕ್ರಿಶ್ಚಿಯನ್, ಜೈನ್, ಬೌದ್ಧ, ಪಾರ್ಸಿ ಹಾಗೂ ಸಿಖ್ ಸಮುದಾಯದ ವಿದ್ಯಾರ್ಥಿಗಳಿಂದ ಪ್ರೋತ್ಸಾಹಧನ ಸೌಲಭ್ಯ ಪಡೆಯಲು ವೆಬ್‌ಸೈಟ್ https://sevasindhu.karnataka.gov.in/sevasindhu/DepartmentService ನಲ್ಲಿ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸುವ ಅವಧಿಯನ್ನು 2026 ರ ಜನವರಿ 31 ರ ವರೆಗೆ ವಿಸ್ತರಿಸಲಾಗಿದೆ.

ಹೆಚ್ಚಿನ ಮಾಹಿತಿಗಾಗಿ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಸಹಾಯವಾಣಿ ಸಂಖ್ಯೆ: 8277799990 ಅಥವಾ ಜಿಲ್ಲಾ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ, ಮೌಲಾನಾ ಆಜಾದ್ ಭವನ, ಅಲೆವೂರು ರಸ್ತೆ, ಮಣಿಪಾಲ ದೂ.ಸಂಖ್ಯೆ: 0820-2573596, ಜಿಲ್ಲಾ ಅಲ್ಪಸಂಖ್ಯಾತರ ಮಾಹಿತಿ ಕೇಂದ್ರ, ನೆಲ ಮಹಡಿ, ಮೌಲಾನಾ ಅಜಾದ್ ಭವನ, ಅಲೆವೂರು ರಸ್ತೆ, ಶಿವಳ್ಳಿ ಗ್ರಾಮ, ಮಣಿಪಾಲ, ದೂರವಾಣಿ ಸಂಖ್ಯೆ: 0820-2574596 ಅಥವಾ ಕಾರ್ಕಳ ದೂರವಾಣಿ ಸಂಖ್ಯೆ: 08258-231101 ಹಾಗೂ ಕುಂದಾಪುರ ದೂರವಾಣಿ ಸಂಖ್ಯೆ: 08254-230370 ತಾಲೂಕು ಅಲ್ಪಸಂಖ್ಯಾತರ ಮಾಹಿತಿ ಕೇಂದ್ರಗಳನ್ನು ಸಂಪರ್ಕಿಸಬಹುದಾಗಿದೆ ಎಂದು ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಅಧಿಕಾರಿಗಳ ಕಚೇರಿ ಪ್ರಕಟಣೆ ತಿಳಿಸಿದೆ.

IMG_5455.jpg.jpeg
kamalashile 11_page-0001.jpg
Aadya 26.jpg.jpeg
WhatsApp Image 2025-03-24 at 6.54.49 AM.jpeg
About Us

ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.

9900402699, 7899167180

© 2021 Suddi Sanchalana. All Rights Reserved.