



ಉಡುಪಿ:
ಕಾಪು ತಾಲೂಕಿನ ಹೆಜಮಾಡಿ ಗ್ರಾಮದ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಪ್ರೌಢಶಾಲಾ ವಿಭಾಗದ ಮುಖ್ಯ ಶಿಕ್ಷಕರ ಕೊಠಡಿಯ ಬಾಗಿಲಿನ ಬೀಗವನ್ನು ಮುರಿದು ಒಳ ನುಗ್ಗಿದ ಕಳ್ಳರು, ಕಪಾಟುಗಳ ಬೀಗವನ್ನು ಮುರಿದು ಅದರೊಳಗಿದ್ದ ಅಕ್ಷರ ದಾಸೋಹ ಆಹಾರ ವಸ್ತುಗಳ ಖರೀದಿಗೆಂದು ಇರಿಸಿದ್ದ 15 ಸಾವಿರ ರೂ. ನಗದು ಅನ್ನು ಕಳವು ಮಾಡಿಕೊಂಡು ಪರಾರಿಯಾಗಿರುವ ಘಟನೆ ನ.9ರಂದು ಬೆಳಕಿಗೆ ಬಂದಿದೆ. ಹೈಸ್ಕೂಲ್ ಕಟ್ಟಡದಲ್ಲಿರುವ ಕಾಲೇಜು ವಿಭಾಗದ ಹಳೆಯ ಕಂಪ್ಯೂಟರ್, ಇನ್ವರ್ಟರ್, ಬ್ಯಾಟರಿಗಳಿರುವ ಕೊಠಡಿಯ ಬಾಗಿಲಿನ ಬೀಗವನ್ನು ಮುರಿದು ಕಳ್ಳತನಕ್ಕೆ ಪ್ರಯತ್ನಿಸಿದ್ದಾರೆ ಎಂಬುದಾಗಿ ಪ್ರೌಢಶಾಲಾ ವಿಭಾಗದ ಹಿರಿಯ ಶಿಕ್ಷಕಿ ಸಂಪಾವತಿ ಎಂಬವರು ನೀಡಿದ ದೂರಿನಂತೆ ಪಡುಬಿದ್ರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.
© 2021 Suddi Sanchalana. All Rights Reserved.