



ಬೆಂಗಳೂರು : ರಾಜ್ಯದ ಗ್ರಾ.ಪಂ ಸದಸ್ಯರ ಗೌರವಧನ ಹೆಚ್ಚಳ ಮಾಡಲಾಗುವುದು ಎಂದು ಕೋಟಾ ಶ್ರೀನಿವಾಸ ಪೂಜಾರಿ ತಿಳಿಸಿದ್ದಾರೆ.
ಮೇಲ್ಮನೆಯಲ್ಲಿ ಮಾತನಾಡಿದ ಸಚಿವರುರಾಜ್ಯದ ಗ್ರಾಮಪಂಚಾಯಿತಿ ಸದಸ್ಯರ ಗೌರವಧನವನ್ನು 2010, 2014 ಮತ್ತು 2017 ರಲ್ಲಿ ಪರಿಷ್ಕರಣೆ ಮಾಡಲಾಗಿದೆ.ಅಧ್ಯಕ್ಷರಿಗೆ 3 ಸಾವಿರ ರೂ. ಉಪಾಧ್ಯಕ್ಷರಿಗೆ 2 ಸಾವಿರ ರೂ. ಸದಸ್ಯರಿಗೆ ಒಂದು ಸಾವಿರ ರೂ. ಗೌರವಧನವಿದ್ದು, ದುಪ್ಪಟ್ಟಾದರೆ ಕ್ರಮವಾಗಿ 6 ಸಾವಿರ ರೂ. 4 ಸಾವಿರ ರೂ. 2 ಸಾವಿರ ರೂ.ಗೆ ಏರಿಕೆಯಾಗಲಿದೆ ಎಂದು ಮಾಹಿತಿ ನೀಡಿದ್ದಾರೆ.
ಇನ್ನು ಗ್ರಾಮಪಂಚಾಯಿತಿ ಅಧ್ಯಕ್ಷರು, ಉಪಾಧ್ಯಕ್ಷರು, ಸದಸ್ಯರಿಗೆ ತಾಲೂಕು ಮತ್ತು ಜಿಲ್ಲಾ ಮಟ್ಟದಲ್ಲಿ ಉಚಿತ ಬಸ್ ಪಾಸ್ ನೀಡಲು ಪರಿಶೀಲನೆ ನಡೆಸಲಾಗುತ್ತಿದೆ ಎಂದು ಹೇಳಿದ್ದಾರೆ.
ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.
© 2021 Suddi Sanchalana. All Rights Reserved.