


ಚಿಕ್ಕಮಗಳೂರು ಜಿಲ್ಲೆಯಲ್ಲಿ ಮಂಗನ ಕಾಯಿಲೆ (ಕೆಎಫ್‌ಡಿ) ವ್ಯಾಪಕವಾಗಿ ಹರಡುತ್ತಿದೆ. ಒಂದೇ ದಿನ ನಾಲ್ವರಲ್ಲಿ ಕಾಯಿಲೆ ದೃಢಪಟ್ಟಿದೆ. ಒಟ್ಟು 18 ಜನರಲ್ಲಿ ಕೆಎಫ್‌ಡಿ ಪತ್ತೆಯಾಗಿದೆ. ಕೊಪ್ಪ ಸರ್ಕಾರಿ ಆಸ್ಪತ್ರೆಯಲ್ಲಿ ವಿಶೇಷ ವಾರ್ಡ್ ತೆರೆಯಲಾಗಿದೆ. ಆರೋಗ್ಯ ಇಲಾಖೆ ಕಾಡಿಗೆ ಹೋಗದಂತೆ ಎಚ್ಚರಿಕೆ ನೀಡಲಾಗಿದೆ. ಸದ್ಯ ಜನರಲ್ಲಿ ಆತಂಕ ಹೆಚ್ಚಾಗಿದೆ.
ಕೊಪ್ಪ ಮತ್ತು ಎನ್ಆರ್ ಪುರ ತಾಲೂಕಿನ ನಾಲ್ವರಲ್ಲಿ ಕೆಎಫ್‌ಡಿ ದೃಢಪಟ್ಟಿದೆ. ಒಟ್ಟು ಜಿಲ್ಲೆಯಲ್ಲಿ 18 ಜನರಲ್ಲಿ ಕೆಎಫ್‌ಡಿ ಪತ್ತೆಯಾಗಿದೆ. ಕೊಪ್ಪ ಸರ್ಕಾರಿ ಆಸ್ಪತ್ರೆಯಲ್ಲಿ ವಿಶೇಷ ವಾರ್ಡ್ ತೆರೆದು ಚಿಕಿತ್ಸೆ ನೀಡಲಾಗಿದ್ದು, ಜನರಲ್ಲಿ ಆತಂಕ ಸೃಷ್ಟಿಸಿದೆ.
ಆರಂಭದಲ್ಲಿ ತೀವ್ರ ಸ್ವರೂಪ ಪಡೆದಿದ್ದ ಕೆ.ಎಫ್.ಡಿ. ಚಿಕ್ಕಮಗಳೂರು ತಾಲೂಕಿನ ಖಾಂಡ್ಯ ಹೋಬಳಿಯ ಮತ್ತಿಖಂಡ ಗ್ರಾಮದ 25 ವರ್ಷದ ಯುವಕನಲ್ಲಿ ಕಾಣಿಸಿಕೊಂಡಿತ್ತು. ಬಳಿಕ ಜಿಲ್ಲೆಯಲ್ಲಿ 7 ಜನರಲ್ಲಿ ಮಂಗನ ಕಾಯಿಲೆ ಕಾಣಸಿಕೊಂಡು ಆತಂಕ ಸೃಷ್ಟಿ ಮಾಡಿತ್ತು. NR ಪುರ ಗ್ರಾಮದ ಮೇಲ್ಪಾಲ್ ಗ್ರಾಮದಲ್ಲೇ ಮೂರು ಜನರಲ್ಲಿ KFD ಕಾಣಿಸಿಕೊಂಡಿತ್ತು.
ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.
© 2021 Suddi Sanchalana. All Rights Reserved.