



ವಿಶ್ವದ ಅನೇಕ ರಾಷ್ಟ್ರಗಳು ದಿವಾಳಿತನದ ಅಂಚಿನಲ್ಲಿ ಸಾಗುತ್ತಿರುವ ಸಂದಿಗ್ಧ ಕಾಲಘಟ್ಟದಲ್ಲಿ ಭಾರತದ ಆರ್ಥಿಕತೆ ಪ್ರಸಕ್ತ ಸಾಲಿನಲ್ಲಿ ಶೇ.7.2 ಜಿಡಿಪಿ ದರದ ನಿರೀಕ್ಷೆಯೊಂದಿಗೆ ಸದೃಢವಾಗಿದ್ದು, ವಿಶ್ವದ ಅತ್ಯಂತ ವೇಗದ ಆರ್ಥಿಕಾಭಿವೃದ್ಧಿಯಲ್ಲಿ ಪ್ರಥಮ ಸ್ಥಾನ ಗಳಿಸಿರುವುದನ್ನು ಉಡುಪಿ ಜಿಲ್ಲಾ ಬಿಜೆಪಿ ಸ್ವಾಗತಿಸಿದೆ.
ಕೇಂದ್ರ ಸರಕಾರದ ಸಾಂಖ್ಯಿಕ ಮತ್ತು ಯೋಜನೆಗಳ ಅನುಷ್ಠಾನ ಸಚಿವಾಲಯ ಬಿಡುಗಡೆ ಮಾಡಿರುವ ದತ್ತಾಂಶಗಳಲ್ಲಿ ಈ ವಿಷಯ ಸ್ಪಷ್ಟವಾಗಿದ್ದು, ಜನರ ದೃಢವಾದ ಬೆಂಬಲ ಮತ್ತು ಅರ್ಥ ವ್ಯವಸ್ಥೆಯ ವಿವಿಧ ಕ್ಷೇತ್ರಗಳಲ್ಲಿನ ಸಾಧನೆಯೇ ಇದಕ್ಕೆ ಕಾರಣ ಎಂದಿರುವ ಪ್ರಧಾನಿ ನರೇಂದ್ರ ಮೋದಿಯವರ ದೂರದರ್ಶಿತ್ವದ ಚಿಂತನೆ ಪ್ರಶಂಸನೀಯ.
ಕಳೆದ 9 ವರ್ಷಗಳ ಜನಪರ ಆಡಳಿತದಲ್ಲಿ ನೂರಾರು ವಿನೂತನ ಯೋಜನೆಗಳ ಸಹಿತ ಕೊರೋನದಂತಹ ದಿಟ್ಟ ಸವಾಲುಗಳನ್ನು ಮೆಟ್ಟಿ ನಿಂತು, ದೇಶದ ಆರ್ಥಿಕ ಶಿಸ್ತನ್ನು ಕಾಪಾಡಿಕೊಳ್ಳುವ ಜೊತೆಗೆ 2025ಕ್ಕೆ ದೇಶದ ಆರ್ಥಿಕತೆಯನ್ನು 5 ಟ್ರಿಲಿಯನ್ ಡಾಲರ್ ಮಟ್ಟಕ್ಕೆ ಕೊಂಡೊಯ್ಯುವ ಮಹತ್ತರವಾದ ಗುರಿಯೊಂದಿಗೆ ಅಭಿವೃದ್ಧಿಯ ಪಥದಲ್ಲಿ ಮುನ್ನಡೆಯುತ್ತಿರುವ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರಕಾರದ ಸಾಧನೆ ಅಭಿನಂದನೀಯ ಎಂದು ಬಿಜೆಪಿ ಜಿಲ್ಲಾ ಸಹ ವಕ್ತಾರ ಶಿವಕುಮಾರ್ ಅಂಬಲಪಾಡಿ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.
© 2021 Suddi Sanchalana. All Rights Reserved.