



ಮಾಲೆ : ಶನಿವಾರ ನಡೆದ ಫೈನಲ್ ಹಣಾಹಣಿಯಲ್ಲಿ ಸುನೀಲ್ ಛೇಟ್ರಿ ಬಳಗ 3-0 ಗೋಲುಗಳಿಂದ ನೇಪಾಳ ತಂಡವನ್ನು ಮಣಿಸಿತು. 13ನೇ ಆವೃತ್ತಿಯ ಟೂರ್ನಿಯಲ್ಲಿ 12ನೇ ಫೈನಲ್ ಪಂದ್ಯವಾಡಿದ ಭಾರತ ತಂಡ ದಕ್ಷಿಣ ಏಷ್ಯಾ ವಲಯದಲ್ಲಿ ತನ್ನ ಪ್ರಾಬಲ್ಯ ಮುಂದುವರಿಸಿತು.
ಇದರಂದಾಗಿ ಭಾರತ ಫುಟ್‌ಬಾಲ್ ತಂಡ 8ನೇ ಬಾರಿಗೆ ದಕ್ಷಿಣ ಏಷ್ಯಾ ಫುಟ್‌ಬಾಲ್ ಫೆಡರೇಷನ್ (ಸ್ಯಾಫ್) ಟ್ರೋಫಿ ಗೆದ್ದುಕೊಂಡಿತು.
ಈ ಮೂಲಕ ಇಗೊರ್ ಸ್ಟಿಮ್ಯಾಕ್ ಮಾರ್ಗದರ್ಶನದಲ್ಲಿ ಭಾರತ ತಂಡ ಜಯಿಸಿದ ಮೊದಲ ಅಂತಾರಾಷ್ಟ್ರೀಯ ಪ್ರಶಸ್ತಿ ಇದಾಗಿದೆ.
ಆರಂಭಗೊಂಡ ಕೆಲ ಹೊತ್ತಿನಲ್ಲೇ ನಾಯಕ ಸುನೀಲ್ ಛೇಟ್ರಿ (48ನೇ ನಿಮಿಷ) ತಂಡಕ್ಕೆ ಮೊದಲ ಗೋಲು ತಂದುಕೊಟ್ಟರು. ಕೆಲಹೊತ್ತಿನಲ್ಲೇ ಸುರೇಶ್ (50) ಮತ್ತೊಂದು ಗೋಲು ದಾಖಲಿಸಿದರು. 90ನೇ ನಿಮಿಷದಲ್ಲಿ ಸಾಹಲ್ ಗೆಲುವಿನ ಅಂತರವನ್ನು ಹಿಗ್ಗಿಸಿದರು.
ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.
© 2021 Suddi Sanchalana. All Rights Reserved.