



ನವದೆಹಲಿ: ರಾಜಧಾನಿ ದೆಹಲಿಯಿಂದ ದೋಹಾಕ್ಕೆ ತೆರಳುತ್ತಿದ್ದ ಭಾರತದ ಇಂಡಿಗೋ ವಿಮಾನ ಪಾಕಿಸ್ತಾನದ ಕರಾಚಿ ವಿಮಾನ ನಿಲ್ದಾಣದಲ್ಲಿ ತುರ್ತು ಭೂ ಸ್ಪರ್ಶ ಮಾಡಿದೆ. ವಿಮಾನದಲ್ಲಿದ್ದ ಪ್ರಯಾಣಿಕರೊಬ್ಬರು ಅಸ್ವಸ್ಥರಾದ ಕಾರಣ ವಿಮಾನ ತುರ್ತು ಭೂ ಸ್ಪರ್ಶ ಮಾಡಿದೆ.
ದುರದೃಷ್ಟವಶಾತ್ ವಿಮಾನದಲ್ಲಿ ಪ್ರಯಾಣಿಸುತ್ತಿದ್ದ ನೈಜಿರೀಯಾ ಮೂಲದ ಅಬ್ಬುಲ್ಲ ಅವರು ಮೃತಪಟ್ಟಿದ್ದಾರೆ. ವಿಮಾನ ಲ್ಯಾಂಡಿಂಗ್ ಆಗುವ ಮೊದಲೇ ಅಬ್ದುಲ್ಲ ಅವರು ಸಾವನ್ನಪ್ಪಿದ್ದಾರೆ ಎಂದು ವರದಿಯಾಗಿದೆ.
ಪ್ರಯಾಣಿಕನ ಆರೋಗ್ಯ ಹದೆಗಟ್ಟ ಹಿನ್ನೆಲೆಯಲ್ಲಿ ಮಾನವೀಯ ನೆಲೆಯಲ್ಲಿ ಲ್ಯಾಂಡಿಂಗ್ ಗೆ ಅನುಮತಿ ನೀಡಬೇಕು ಎಂದು ಪೈಲಟ್ ಮನವಿ ಮಾಡಿದ್ದರು. ಇದನ್ನು ಪಾಕಿಸ್ತಾನದ ವಾಯು ಯಾನ ಇಲಾಖೆ ಪುರಸ್ಕರಿಸಿತ್ತು.
ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.
© 2021 Suddi Sanchalana. All Rights Reserved.