logo
WhatsApp Image 2025-08-20 at 6.11.39 PM - Copy.jpeg
SHARADA TECHERS.jpeg
hindalco everlast.jpeg

ಗೃಹ ಬಳಕೆಯ ಅಡುಗೆ ಅನಿಲ ಸಿಲಿಂಡರ್ ಬೆಲೆಯಲ್ಲಿ ₹ 50 ಹೆಚ್ಚಳ

ಟ್ರೆಂಡಿಂಗ್
share whatsappshare facebookshare telegram
7 May 2022
post image

ನವದೆಹಲಿ: ಗೃಹ ಬಳಕೆಯ ಅಡುಗೆ ಅನಿಲ ಸಿಲಿಂಡರ್ ಬೆಲೆಯಲ್ಲಿ ₹ 50 ಹೆಚ್ಚಳ ಮಾಡಲಾಗಿದೆ. ಹೀಗಾಗಿ, ದೇಶದ ರಾಜಧಾನಿ ದೆಹಲಿಯಲ್ಲಿ ₹ 949.50ಇದ್ದ 14.2 ಕೆ.ಜಿ ತೂಕದ ಸಿಲಿಂಡರ್ ಬೆಲೆ ₹ 999.50 ಆಗಿದೆ.

ಈ ತಿಂಗಳ ಆರಂಭದಲ್ಲಿ ವಾಣಿಜ್ಯ ಬಳಕೆಯ ಎಲ್‌ಪಿಜಿ ಸಿಲಿಂಡರ್‌ಗಳ ಬೆಲೆಯನ್ನು ಹೆಚ್ಚಿಸಲಾಗಿತ್ತು.

ಮೇ 1 ರಂದು, ವಾಣಿಜ್ಯ ಬಳಕೆಯ 19 ಕೆಜಿ ಎಲ್‌ಪಿಜಿ ಸಿಲಿಂಡರ್‌ನ ಬೆಲೆಯಲ್ಲಿ ₹102.50 ಹೆಚ್ಚಳ ಮಾಡುವ ಮೂಲಕ ₹ 2355.50ಕ್ಕೆ ಏರಿಸಲಾಗಿತ್ತು. ಅಲ್ಲದೆ, 5 ಕೆ.ಜಿ ಸಿಲಿಂಡರ್‌ನ ಬೆಲೆಯನ್ನು ₹655ಕ್ಕೆ ಏರಿಸಲಾಗಿತ್ತು.

ದೇಶದಲ್ಲಿ ಹೆಚ್ಚುತ್ತಿರುವ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಯಿಂದ ಜನರು ಈಗಾಗಲೇ ತೊಂದರೆಗೊಳಗಾಗಿರುವ ಸಮಯದಲ್ಲಿ ಸಿಲಿಂಡರ್ ಬೆಲೆ ಏರಿಕೆ ಕಂಡಿದ್ದು, ಸಾಮಾನ್ಯ ಜನರ ಸಂಕಷ್ಟಗಳನ್ನು ಹೆಚ್ಚಿಸಲಿದೆ.

ಏಪ್ರಿಲ್ 1 ರಂದು, 19 ಕೆ.ಜಿ ವಾಣಿಜ್ಯ ಬಳಕೆಯ ಎಲ್‌ಪಿಜಿ ಪ್ರತಿ ಸಿಲಿಂಡರ್‌ ಬೆಲೆಯಲ್ಲಿ ₹ 250 ಏರಿಕೆ ಮಾಡಲಾಗಿತ್ತು. ಮಾರ್ಚ್ 1 ರಂದು ವಾಣಿಜ್ಯ ಬಳಕೆಯ ಎಲ್‌ಪಿಜಿ ಸಿಲಿಂಡರ್ ಬೆಲೆಯಲ್ಲಿ ₹105 ರಷ್ಟು ಹೆಚ್ಚಳವಾಗಿತ್ತು.

Nudisiri Invitation Karkala-3_251125_112501_page-0001.jpg
Nudisiri Invitation Karkala-3_251125_112501_page-0002.jpg
WhatsApp Image 2025-10-28 at 20.32.23_e43aa502.jpg
WhatsApp Image 2025-10-09 at 20.22.41_774d43da.jpg
WhatsApp Image 2025-09-22 at 7.57.12 AM.jpeg
WhatsApp Image 2025-09-22 at 7.57.12 AM (1).jpeg
WhatsApp Image 2025-07-31 at 11.09.37 PM.jpeg
WhatsApp Image 2025-08-20 at 6.11.39 PM.jpeg
AADYA ELECTRONICS Back 11FINAL_page-0001.jpg
WhatsApp Image 2025-03-24 at 6.54.49 AM.jpeg
WhatsApp Image 2025-01-13 at 14.53.16 (1).jpeg
About Us

ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.

9900402699, 7899167180

© 2021 Suddi Sanchalana. All Rights Reserved.