



ಆಂಧ್ರ ಪ್ರದೇಶ: 10 ವರ್ಷಗಳ ನಂತರ, ಆಂಧ್ರ ಪ್ರದೇಶದ ನಲ್ಲಮಲ ಅರಣ್ಯದಲ್ಲಿ ಅಳಿವಿನಂಚಿನಲ್ಲಿರುವ ಭಾರತೀಯ ತೋಳಗಳು ಪತ್ತೆಯಾಗಿದೆ.
ಆಂಧ್ರ ಪ್ರದೇಶದ ನಲ್ಲಮಲ ಅರಣ್ಯ ವಲಯದ ಅರಣ್ಯಾಧಿಕಾರಿಗಳು ಇತ್ತೀಚೆಗೆ ದೋರ್ನಾಳ-ಆತ್ಮಕೂರು ಗಡಿ ಪ್ರದೇಶದಲ್ಲಿ ಅಳಿವಿನಂಚಿನಲ್ಲಿರುವ ಭಾರತೀಯ ತೋಳಗಳನ್ನು ಪತ್ತೆ ಮಾಡಿದ್ದಾರೆ. ಸುಮಾರು ಒಂದು ದಶಕದ ನಂತರ ಈ ವಿಶೇಷ ವನ್ಯಜೀವಿ ಕಾಣಿಸಿಕೊಂಡಿರುವುದು ಅರಣ್ಯಾಧಿಕಾರಿಗಳು ಮತ್ತು ವನ್ಯಜೀವಿ ಪ್ರಿಯರಲ್ಲಿ ಹರ್ಷವನ್ನು ತಂದಿದೆ.
ಒಂದು ತಿಂಗಳ ಹಿಂದೆ, ರೊಳ್ಳಪಾಡು ಅರಣ್ಯ ಪ್ರದೇಶದಲ್ಲಿ ತೋಳಗಳ ಗುಂಪನ್ನು ಕ್ಯಾಮೆರಾ ಟ್ರ್ಯಾಪ್‌ನಲ್ಲಿ ಸೆರೆಹಿಡಿಯಲಾಗಿತ್ತು. ಕೆಲವು ದಿನಗಳ ಹಿಂದೆ, ಮತ್ತೊಂದು ಹಿಂಡು ದೋರ್ನಾಳ-ಆತ್ಮಕೂರು ಶ್ರೀಶೈಲಂ ಅರಣ್ಯ ಪ್ರದೇಶದ ಬಳಿ ಕಾಣಿಸಿಕೊಂಡಿತ್ತು
ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.
© 2021 Suddi Sanchalana. All Rights Reserved.