


ಭಾರತ ತಂಡದ ಖ್ಯಾತ, ಕಲಾತ್ಮಕ ವೇಗಿ ರವಿಚಂದ್ರನ್ ಅಶ್ವಿನ್ ಅಂತರಾಷ್ಟ್ರೀಯ ಕ್ರಿಕೆಟ್ ಗೆ ವಿದಾಯ ಹೇಳಿದ್ದಾರೆ. ಅವರ ದಿಢೀರ್ ನಿರ್ಧಾರ ಅಭಿಮಾನಿಗಳಲ್ಲಿ ಸಾಕ್ ಜೊತೆ ನಿರಾಶೆ ಮೂಡಿಸಿದೆ.
ಅಶ್ವಿನ್, ಆಸ್ಟ್ರೇಲಿಯಾದ ಟೆಸ್ಟ್ ಸರಣಿಯ ವೇಳೆ ಸುದ್ದಿಗೋಷ್ಟಿಯಲ್ಲಿ ಈ ನಿರ್ಧಾರ ಘೋಷಿಸಿದ್ದಾರೆ. ಅಶ್ವಿನ್ ಒಟ್ಟು 106 ಟೆಸ್ಟ್ ಪಂದ್ಯಗಳನ್ನಾಡಿದ್ದಾರೆ, 200 ಇನಿಂಗ್ಸ್ಗಳಲ್ಲಿ ಬೌಲಿಂಗ್ ಮಾಡಿದ್ದಾರೆ. ಟೆಸ್ಟ್ ನಲ್ಲಿ 27246 ಎಸೆತಗಳನ್ನು ಎಸೆದು ಭರ್ಜರಿ 537 ವಿಕೆಟ್ ಉರುಳಿಸಿದ್ದಾರೆ.
116 ಏಕದಿನ ಪಂದ್ಯಗಳಲ್ಲಿ 114 ಇನಿಂಗ್ಸ್ ಆಡಿ 156 ವಿಕೆಟ್ ಪಡೆದರೆ, 65 ಟಿ20 ಪಂದ್ಯಗಳಲ್ಲಿ ಟೀಮ್ ಇಂಡಿಯಾವನ್ನು ಪ್ರತಿನಿಧಿಸಿ 72 ವಿಕೆಟ್ ಕಬಳಿಸಿದ್ದಾರೆ. ಒಟ್ಟಾಯಲ್ಲಿ ಕ್ರಿಕೆಟ್ ಬದುಕಿನಲ್ಲಿ ಹಲವಾರು ಮೈಲಿಗಲ್ಲುಗಳನ್ನು ದಾಟಿ, ದಾಖಲೆ ಬರೆದಿದ್ದಾರೆ. ಭಾರತದ ಪರ ಅತ್ಯಧಿಕ ವಿಕೆಟ್ ಕಬಳಿಸಿದ 2ನೇ ಬೌಲರ್ ಎನಿಸಿಕೊಂಡಿದ್ದಾರೆ. ಹಾಗೆ ಹಲವಾರು ದಾಖಲೆಗಳನ್ನು ಮುರಿದ ಹೆಗ್ಗಳಿಕೆಯೂ ಇವರಿಗಿದೆ.
ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.
© 2021 Suddi Sanchalana. All Rights Reserved.