



ಪಡುಬಿದ್ರೆ:ನಿಯಂತ್ರಣ ತಪ್ಪಿದ ದ್ವಿಚಕ್ರ ವಾಹನವೊಂದು ರಸ್ತೆ ಬದಿಯ ಕಂಬಕ್ಕೆ ಡಿಕ್ಕಿಯಾದ ಪರಿಣಾಮ ಸವಾರ ಮೃತಪಟ್ಟ ಘಟನೆ ಕಾರ್ಕಳ ಇನ್ನಾ ಗ್ರಾಮದ ಕಾಂಜರಕಟ್ಟೆ ಸಮೀಪ ನಡೆದಿದೆ. ಮೃತ ಸವಾರನನ್ನು ರಾಜ್ ಕಿಶೋರ್ ಎಂದು ಗುರುತಿಸಲಾಗಿದೆ. ಸಹಸವಾರ ಕಾರ್ತಿಕ್ ಸಣ್ಣ ಗಾಯಗಳೊಂದಿಗೆ ಅಪಾಯದಿಂದ ಪಾರಾಗಿದ್ದಾರೆ. ಇವರಿಬ್ಬರು ಮುಂಬೈಗೆ ತೆರಳುತ್ತಿದ್ದ ಸ್ನೇಹಿತನನ್ನು ಬೀಳ್ಕೊಡಲು ಹೋಗಿದ್ದರು. ಹಿಂತಿರುಗುವ ವೇಳೆ ಈ ಅಪಘಾತ ಸಂಭವಿಸಿದೆ. ಈ ಬಗ್ಗೆ ಪಡುಬಿದ್ರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.
© 2021 Suddi Sanchalana. All Rights Reserved.