



ಪುತ್ತೂರು: ಶಾಸಕ ಹರೀಶ್ ಪೂಂಜಾ ವಿರುದ್ಧ ಎಫ್ ಐ ಆರ್ ದಾಖಲಾಗಿದ್ದು, ಕಳೆಂಜದ ಮೀಸಲು ಅರಣ್ಯ ಪ್ರದೇಶದ ಜಾಗವನ್ನು ಒತ್ತುವರಿ ಮಾಡಿಕೊಂಡು ಮನೆ ನಿರ್ಮಾಣ ಮಾಡಿದ್ದನ್ನು ತೆರವುಗೊಳಿಸಲು ಉಪ್ಪಿನಂಗಡಿ ವಲಯ ಅರಣ್ಯ ಇಲಾಖೆ ಸಿಬ್ಬಂದಿ ಮುಂದಾದಾಗ ಕರ್ತವ್ಯನಿರತ ಅಧಿಕಾರಿ ಮತ್ತು ಸಿಬ್ಬಂದಿಗಳಿಗೆ ಶಾಸಕ ಹರೀಶ್ ಪೂಂಜ ಅವರು ಸಾರ್ವಜನಿಕವಾಗಿ ಅವಾಚ್ಯ ಶಬ್ದಗಳಿಂದ ನಿಂದಿಸಿದ್ದಾರೆ. ಅಲ್ಲದೆ ಕರ್ತವ್ಯಕ್ಕೆ ಅಡ್ಡಿಪಡಿಸಿರುವುದಾಗಿ ಆರೋಪಿಸಿ ಪುತ್ತೂರು ರಾಜ್ಯ ಸರಕಾರಿ ನೌಕರರ ಸಂಘ ಖಂಡನೆ ವ್ಯಕ್ತಪಡಿಸಿದ್ದು, ಪುತ್ತೂರು ಉಪ ವಿಭಾಗದ ಸಹಾಯಕ ಆಯುಕ್ತ ಗಿರೀಶ್ ನಂದನ್ ಅವರಿಗೆ ದೂರು ನೀಡಿದೆ. ಸಾರ್ವಜನಿಕವಾಗಿ ಅರಣ್ಯ ಸಿಬಂದಿ ಮೇಲೆ ಸುಳ್ಳು ಆರೋಪ ಹೊರಿಸಿ ಮಾನ ಹಾನಿ ಮಾಡಿದ್ದಾರೆ ಎಂದು ಆರೋಪಿಸಿರುವ ಸಂಘವು ಶಾಸಕ ಹರೀಶ್ ಪೂಂಜ ಹಾಗೂ ಮತ್ತಿತರರ ವಿರುದ್ಧ ಐಪಿಸಿ 1860(U/S-143, 353, 504, 149) ಅಡಿ ಸೂಕ್ತ ಕಾನೂನು ಕ್ರಮ ಕೈಗೊಳ್ಳುವಂತೆ ದೂರಿನಲ್ಲಿ ಆಗ್ರಹಿಸಲಾಗಿದೆ ಎಂದು ತಿಳಿದು ಬಂದಿದೆ.
ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.
© 2021 Suddi Sanchalana. All Rights Reserved.