logo
WhatsApp Image 2025-08-20 at 6.11.39 PM - Copy.jpeg
SHARADA TECHERS.jpeg
hindalco everlast.jpeg

ದಿನಪತ್ರಿಕೆ ವಿತರಕರಿಗೆ ವಿಮಾ ಯೋಜನೆ: ನೋಂದಣಿಗೆ ಸೂಚನೆ

ಟ್ರೆಂಡಿಂಗ್
share whatsappshare facebookshare telegram
23 Dec 2023
post image

ಉಡುಪಿ: ಕಾರ್ಮಿಯ ಇಲಾಖೆಯು ದಿನಪತ್ರಿಕೆ ವಿತರಕ ಕಾರ್ಮಿಕರಿಗೆ ಅಪಘಾತ ಪರಿಹಾರ ಹಾಗೂ ವೈದ್ಯಕೀಯ ಸೌಲಭ್ಯ ಯೋಜನೆಯನ್ನು ಜಾರಿಗೆ ತಂದಿದ್ದು, ಈ ಯೋಜನೆಯಡಿ ಇ-ಶ್ರಮ್ ನಲ್ಲಿ ನೋಂದಣಿಯಾದ ದಿನಪತ್ರಿಕೆ ವಿತರಕ ಕಾರ್ಮಿಕರು ಈ ಯೋಜನೆಯ ಸದುಪಯೋಗ ಪಡೆದುಕೊಳ್ಳಬಹುದಾಗಿದೆ. 16 ರಿಂದ 59 ವರ್ಷದೊಳಗಿನ ದಿನಪತ್ರಿಕೆ ವಿತರಕ ಕಾರ್ಮಿಕರು ಇದುವರೆಗೂ ಇ-ಶ್ರಮ್ ನಲ್ಲಿ ನ್ಯೂಸ್ ಪೇಪರ್ ಬಾಯ್ ಎಂದು ನೋಂದಣಿ ಮಾಡದೇ ಇದ್ದರೆ, ಈ ಕೂಡಲೇ ಇ-ಶ್ರಮ್ ಪೋರ್ಟಲ್ www.eshram.gov.in ನಲ್ಲಿ ಸ್ವಯಂ ಆಗಿ ಅಥವಾ ಹತ್ತಿರದ ಸೇವಾ ಕೇಂದ್ರಗಳಲ್ಲಿ ನೋಂದಾಯಿಸುವ ಮೂಲಕ ಯೋಜನೆಯ ಲಾಭವನ್ನು ಪಡೆಯಬಹುದು.

ಜಿಲ್ಲೆಯಲ್ಲಿ ವಿಶೇಷ ಇ-ಶ್ರಮ್ ನೋಂದಣಿ ಕ್ಯಾಂಪ್‌ಗಳನ್ನು ಡಿಸೆಂಬರ್ 28 ಮತ್ತು 30 ರಂದು ಜಿಲ್ಲಾ ಕೇಂದ್ರ ಸ್ಥಾನದ ಕಾರ್ಮಿಕ ಅಧಿಕಾರಿಗಳ ಕಚೇರಿಯಲ್ಲಿ ಹಾಗೂ 2024 ರ ಜನವರಿ 3 ರಂದು ಕುಂದಾಪುರ ಮತ್ತು ಕಾರ್ಕಳ ತಾಲೂಕಿನ ಕಾರ್ಮಿಕ ನಿರೀಕ್ಷಕರ ಕಚೇರಿಯಲ್ಲಿ ಹಮ್ಮಿಕೊಳ್ಳಲಾಗಿದ್ದು, ದಿನಪತ್ರಿಕೆ ವಿತರಕ ಕಾರ್ಮಿಕರು ವಿಶೇಷ ನೋಂದಣಿ ಕ್ಯಾಂಪ್‌ನಲ್ಲಿ ಭಾಗವಹಿಸಿ ಇ-ಶ್ರಮ್ ನಲ್ಲಿ ನೋಂದಣಿ ಮಾಡಿಕೊಂಡು ಯೋಜನೆಯ ಪ್ರಯೋಜನ ಪಡೆದುಕೊಳ್ಳುವಂತೆ ಹಾಗೂ ಹೆಚ್ಚಿನ ಮಾಹಿತಿಗಾಗಿ ಕಾರ್ಮಿಕ ಸಹಾಯವಾಣಿ 155214 (24*7), ಕಾರ್ಮಿಕ ಅಧಿಕಾರಿಗಳು ಹಾಗೂ ಹಿರಿಯ ಕಾರ್ಮಿಕ ನಿರೀಕ್ಷಕರು/ ಕಾರ್ಮಿಕ ನಿರೀಕ್ಷಕರ ಕಚೇರಿಯನ್ನು ಸಂಪರ್ಕಿಸಬಹುದಾಗಿದೆ ಎಂದು ಜಿಲ್ಲಾ ಕಾರ್ಮಿಕ ಅಧಿಕಾರ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Nudisiri Invitation Karkala-3_251125_112501_page-0001.jpg
Nudisiri Invitation Karkala-3_251125_112501_page-0002.jpg
WhatsApp Image 2025-10-28 at 20.32.23_e43aa502.jpg
WhatsApp Image 2025-10-09 at 20.22.41_774d43da.jpg
WhatsApp Image 2025-09-22 at 7.57.12 AM.jpeg
WhatsApp Image 2025-09-22 at 7.57.12 AM (1).jpeg
WhatsApp Image 2025-07-31 at 11.09.37 PM.jpeg
WhatsApp Image 2025-08-20 at 6.11.39 PM.jpeg
AADYA ELECTRONICS Back 11FINAL_page-0001.jpg
WhatsApp Image 2025-03-24 at 6.54.49 AM.jpeg
WhatsApp Image 2025-01-13 at 14.53.16 (1).jpeg
About Us

ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.

9900402699, 7899167180

© 2021 Suddi Sanchalana. All Rights Reserved.