



ಕಾರ್ಕಳ : ತಾಲೂಕಿನಲ್ಲಿ ಇತ್ತೀಚೆಗೆ ಅಪಘಾತ ಪ್ರಕರಣ ಜಾಸ್ತಿಯಾಗುತ್ತಿದ್ದು ಕೆಲವರು ಪ್ರಾಣ ಕಳೆದುಕೊಂಡಿದ್ದಾರೆ ಮೇ 17ರಂದು ಕಾರ್ಕಳ ನಗರ ಠಾಣೆ ಪೊಲೀಸರು ಕಾರ್ಕಳ ವಿವಿಧ ಕಡೆಗಳಲ್ಲಿ ವಾಹನಗಳ ತಪಾಸಣೆ, ದಾಖಲೆ ಪರಿಶೀಲನೆ ನಡೆಸಿದರು. ಕಾರ್ಕಳ ನಗರ ಪೊಲೀಸ್ ಠಾಣೆ ಎಸ್‌ಐ ಪ್ರಸನ್ನ ಎಂ.ಎಸ್., ಎಎಸ್‌ಐಗಳಾದ ರಾಜೇಶ್, ಯಶವಂತ್, ದಿನಕರ್, ಪಿ ಸಿ ಗಿರೀಶ್, ಯತೀಶ್ ಅವರು ವಾಹನ ಚಾಲಕರು, ದ್ವಿಚಕ್ರ ಸವಾರನ್ನು ನಿಲ್ಲಿಸಿ ದಾಖಲೆ ಪರಿಶೀಲಿಸಿ, ಹೆಲ್ಮೆಟ್ ಧರಿಸದೆ ವಾಹನ ಚಲಾಯಿಸುವ ಹಾಗೂ ಸೀಟ್ ಬೆಲ್ಟ್ ಧರಿಸದ ಚಾಲಕರಿಗೆ ಸ್ಥಳದಲ್ಲೇ ಜುಲ್ಮಾನೆ ಭರಿಸಿಕೊಂಡು ದಾಖಲೆಗಳಿಲ್ಲದ ವಾಹನಗಳನ್ನು ವಶಕ್ಕೆ ಪಡೆದುಕೊಳ್ಳುವ ಜೊತೆಗೆ ರಸ್ತೆ ನಿಯಮಗಳ ಬಗ್ಗೆ ಜಾಗ್ರತಿ ನೀಡಿದರು
ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.
© 2021 Suddi Sanchalana. All Rights Reserved.