



ಬೆಂಗಳೂರು: ಅಕ್ರಮ ಹಣ ಪತ್ತೆ ಪ್ರಕರಣಕ್ಕೆ ಸಂಬಂಧಿಸಿದಂತೆ ಹೈಕೋರ್ಟ್ ಮಧ್ಯಂತರ ಜಾಮೀನು ನೀಡಿರುವುದನ್ನು ಪ್ರಶ್ನಿಸಿ ಲೋಕಾಯುಕ್ತ ಸುಪ್ರೀಂ ಕೋರ್ಟ್ ನಲ್ಲಿ ಮೇಲ್ಮನವಿ ಸಲ್ಲಿಸಿದೆ ಎಂದು ವರದಿಯಾಗಿದೆ.
ಶಾಸಕ ವಿರೂಪಾಕ್ಷಪ್ಪ ಅವರನ್ನು ಬಂಧಿಸದಂತೆ ಈ ಹಿಂದೆ ರಾಜ್ಯ ಹೈಕೋರ್ಟಿನ ಏಕ ಸದಸ್ಯ ಪೀಠ ಮಧ್ಯಂತರ ಆದೇಶ ನೀಡಿತ್ತು.
ಹೈಕೋರ್ಟ್ ತರಾತುರಿಯಲ್ಲಿ ತೀರ್ಪು ನೀಡಿರುವದಕ್ಕೆ ಕೆಲವು ವಕೀಲರು ಕೂಡ ವಿರೋಧ ವ್ಯಕ್ತಪಡಿಸಿದ್ದರು. ಇದೀಗ ಜಾಮೀನು ರದ್ದುಪಡಿಸುವಂತೆ ಕೋರಿ ಲೋಕಾಯುಕ್ತ ಸುಪ್ರೀಂ ಕೋರ್ಟ್ ನಲ್ಲಿ ಅರ್ಜಿ ಸಲ್ಲಿಸಿದೆ.
ಇದೇ ವೇಳೆ ಶಾಸಕ ವಿರೂಪಾಕ್ಷಪ್ಪ ಅವರ ಪುತ್ರ ಮಾಡಾಳ್ ಪ್ರಕಾಶ್ ಮತ್ತುಸುರೇಂದ್ರ ಎಂಬವರನ್ನು ಲೋಕಾಯುಕ್ತ ಬಂಧಿಸಿದೆ.
ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.
© 2021 Suddi Sanchalana. All Rights Reserved.