logo
WhatsApp Image 2026-04-02 at 14.46.04.jpeg
hindalco everlast.jpeg

ಭಾರತದಲ್ಲಿ ಅಕ್ಟೋಬರ್ 31ರವರೆಗೂ ಅಂತಾರಾಷ್ಟ್ರೀಯ ಕಮರ್ಷಿಯಲ್ ವಿಮಾನಗಳ ಹಾರಾಟ ನಿಷೇಧ.

ಟ್ರೆಂಡಿಂಗ್
share whatsappshare facebookshare telegram
28 Sept 2021
post image

ಕೊರೋನಾ ಹಿನ್ನೆಲೆ ಸೆ. 30ರವರೆಗೂ ನಿರ್ಬಂಧ ಹೇರಲಾಗಿದ್ದ ಅಂತಾರಾಷ್ಟ್ರೀಯ ವಿಮಾನಗಳ ಹಾರಾಟವನ್ನು ಮತ್ತೆ ವಿಸ್ತರಿಸಲಾಗಿದ್ದು, ಭಾರತದಲ್ಲಿ ಅಕ್ಟೋಬರ್ 31ರವರೆಗೂ ಅಂತಾರಾಷ್ಟ್ರೀಯ ಕಮರ್ಷಿಯಲ್ ವಿಮಾನಗಳ ಹಾರಾಟವನ್ನು ನಿಷೇಧಿಸಲಾಗಿದೆ. ಭಾರತದಲ್ಲಿ 3ನೇ ಅಲೆಯ ಕೊರೋನಾ ಹರಡುವಿಕೆಯನ್ನು ನಿಯಂತ್ರಿಸಲು ಭಾರತದಲ್ಲಿ ಅಂತಾರಾಷ್ಟ್ರೀಯ ವಿಮಾನಗಳ ಸಂಚಾರದ ಮೇಲೆ ವಿಧಿಸಿದ್ದ ನಿಷೇಧವನ್ನು ಅಕ್ಟೋಬರ್ 31ರವರೆಗೂ ವಿಸ್ತರಿಸಲು ಕೇಂದ್ರ ಸರ್ಕಾರ ನಿರ್ಧರಿಸಿದೆ. ಈ ಬಗ್ಗೆ ಏವಿಯೇಷನ್ ರೆಗ್ಯುಲೇಟರ್ ಡೈರೆಕ್ಟೊರೇಟ್ ಜನರಲ್ ಆಫ್ ಸಿವಿಲ್ ಏವಿಯೇಷನ್ (DGCA) ಸುತ್ತೋಲೆ ಹೊರಡಿಸಿದ್ದು, ಈ ಆದೇಶ ಅಂತಾರಾಷ್ಟ್ರೀಯ ಪ್ರಯಾಣಿಕರ ವಿಮಾನಗಳಿಗೆ ಮಾತ್ರ ಅನ್ವಯವಾಗಲಿದೆ. ಡಿಜಿಸಿಎಯಿಂದ ಅನುಮತಿ ಪಡೆದಿರುವ ಕಾರ್ಗೋ ವಿಮಾನಗಳ ಸಂಚಾರಕ್ಕೆ ನಿರ್ಬಂಧವಿರುವುದಿಲ್ಲ. ಹಾಗೇ ವಿಶೇಷ ಅನುಮತಿ ಪಡೆದ ಮಾರ್ಗಗಳಲ್ಲಿ ಅಂತಾರಾಷ್ಟ್ರೀಯ ವಿಮಾನ ಸಂಚಾರ ಮಾಡಲು ಅವಕಾಶವಿದೆ.

Aadya 26.jpg.jpeg
WhatsApp Image 2025-03-24 at 6.54.49 AM.jpeg
About Us

ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.

9900402699, 7899167180

© 2021 Suddi Sanchalana. All Rights Reserved.