logo
WhatsApp Image 2026-04-02 at 14.46.04.jpeg
hindalco everlast.jpeg

ಮಣಿಪಾಲದ ಕಸ್ತೂರ್ಬಾ ಆಸ್ಪತ್ರೆ ಯ ರಕ್ತನಿಧಿ ಕೇಂದ್ರಕ್ಕೆ ಇಂಟರ್ನ್ಯಾಷನಲ್ ಸೊಸೈಟಿ ಆಫ್ ಬ್ಲಡ್ ಟ್ರಾನ್ಸ್ಫ್ಯೂಷನ್ ಅಂತಾರಾಷ್ಟ್ರೀಯ (ISBT)  ಪ್ರಶಸ್ತಿ

ಟ್ರೆಂಡಿಂಗ್
share whatsappshare facebookshare telegram
7 Jun 2022
post image

ಮಣಿಪಾಲ : ಇಂಟರ್ನ್ಯಾಷನಲ್  ಸೊಸೈಟಿ ಆಫ್ ಬ್ಲಡ್ ಟ್ರಾನ್ಸ್ಫ್ಯೂಷನ್ (ಐಎಸ್ ಬಿಟಿ) ನ 37ನೇ ಇಂಟರ್ನ್ಯಾಷನಲ್ ಕಾಂಗ್ರೆಸ್ ನ ಉದ್ಘಾಟನಾ ಸಮಾರಂಭದಲ್ಲಿ ಕಸ್ತೂರ್ಬಾ ಆಸ್ಪತ್ರೆಯ ರಕ್ತ ಕೇಂದ್ರಕ್ಕೆ ಅಭಿವೃದ್ಧಿ ಶೀಲ ರಾಷ್ಟಗಳಿಗೆ ಕೊಡಲ್ಪಡುವ ಇಂಟರ್ನ್ಯಾಷನಲ್ ಸೊಸೈಟಿ ಆಫ್ ಬ್ಲಡ್ ಟ್ರಾನ್ಸ್ಫ್ಯೂಷನ್ ಅಂತಾರಾಷ್ಟ್ರೀಯ (ISBT)  ಪ್ರಶಸ್ತಿಯನ್ನು ನೀಡಿ ಗೌರವಿಸಲಾಯಿತು.

ಪ್ರಶಸ್ತಿಯನ್ನು ಸ್ವೀಕರಿಸಿದ ಕಸ್ತೂರ್ಬಾ ರಕ್ತನಿಧಿಯ ಮುಖ್ಯಸ್ಥೆ   ಡಾ.ಶಮೀ ಶಾಸ್ತ್ರಿ ಮಾತನಾಡಿ, “ರಕ್ತ ಸಂಗ್ರಹಣೆಯಿಂದ ಹಿಡಿದು ಸಂಸ್ಕರಣಾ ಹಾಗೂ ಪರೀಕ್ಷಾ ವಿಧಾನಗಳಲ್ಲಿ ಗುಣಮಟ್ಟವನ್ನು ಕಾಪಾಡಿಕೊಂಡು ಬರಲಾಗಿದೆ. ಉತ್ತಮ ಸೇವೆ ನೀಡುವುದರ ಮೂಲಕ, ತರಬೇತಿ, ಜಾಗತಿಕ ಮಟ್ಟದ ತಂತ್ರಜ್ಞಾನದ ಮಾಹಿತಿ ಶೈಕ್ಷಣಿಕ, ತರಬೇತಿ ಚಟುವಟಿಕೆಗಳು, ಪ್ರಕಟಣೆಗಳು, ಪ್ರಸ್ತುತಿಗಳು, ಪ್ರಾದೇಶಿಕ ಮತ್ತು ಜಾಗತಿಕ ಸಹಯೋಗಗಳು ಮತ್ತು ಎಲ್ಲವನ್ನೂ ಪರಿಗಣಿಸಲಾಗಿದ್ದು ಮೌಲ್ಯ ಮಾಪನಕ್ಕೆ ಪರಿಗಣಿಸಲಾಗಿದೆ. ಉತ್ತಮ ಸೇವೆಯ ಯನ್ನು ಪರಿಗಣಿಸಿ ಈ ಪ್ರಶಸ್ತಿ ನೀಡಲಾಗಿದೆ ಎಂದು ಹೇಳಿದರು.

ಕಸ್ತೂರ್ಬಾ ಆಸ್ಪತ್ರೆ, ಮಣಿಪಾಲದ ವೈದ್ಯಕೀಯ ವಿಭಾಗದ ಅಧೀಕ್ಷಕ ಡಾ.ಅವಿನಾಶ್ ಶೆಟ್ಟಿ ಮಾತನಾಡಿ, “ ರಕ್ತ ಕೇಂದ್ರದ ಸಂಘಟನಾತ್ಮಕವಾದ ವ್ಯವಸ್ಥೆ ಹಾಗು ರಕ್ತದಾನಿಗಳಲ್ಲಿ ರಕ್ತದಾನದ ಅರಿವು ಹಾಗು ರಕ್ತ ವರ್ಗಾವಣೆಯ ವಿವಿಧ ಸೇವೆಗಳು ಮತ್ತು ಮಹತ್ವದ ಕೊಡುಗೆಗಳನ್ನು ಪರಿಗಣಿಸಿ ಈ ಪ್ರಶಸ್ತಿ ನೀಡಲಾಗಿದೆ. ಇದರ ಹಿಂದಿನ ರಕ್ತ ಕೇಂದ್ರದ ಎಲ್ಲರ ಶ್ರಮವೆ ಕಾರಣ ” ಎಂದರು. ಈ ಸಂದರ್ಭದಲ್ಲಿ ಮಣಿಪಾಲದ ಕಸ್ತೂರ್ಬಾ ವೈದ್ಯಕೀಯ ಕಾಲೇಜಿನ ಡೀನ್ ಡಾ ಶರತ್ ಕುಮಾರ್  ರಾವ್, ಮಣಿಪಾಲದ ಕಸ್ತೂರ್ಬಾ ಆಸ್ಪತ್ರೆಯ ಮುಖ್ಯ ನಿರ್ವಹಣಾಧಿಕಾರಿ ಸಿ.ಜಿ ಮುತ್ತಣ್ಣ ಮೊದಲಾದವರು ಉಪಸ್ಥಿತರಿದ್ದರು.

Aadya 26.jpg.jpeg
WhatsApp Image 2025-03-24 at 6.54.49 AM.jpeg
About Us

ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.

9900402699, 7899167180

© 2021 Suddi Sanchalana. All Rights Reserved.