logo
WhatsApp Image 2026-04-02 at 14.46.04.jpeg
hindalco everlast.jpeg

ಮ್ಯಾಟ್ರಿಮೋನಿ ಸೈಟ್‌ನಲ್ಲಿ ಪರಿಚಯ: ಮದುವೆಯಾಗುವೆನೆಂದು ನಂಬಿಸಿ ಉದ್ಯಮಿಗೆ ₹87 ಲಕ್ಷಕ್ಕೂ ಅಧಿಕ ವಂಚನೆ

ಟ್ರೆಂಡಿಂಗ್
share whatsappshare facebookshare telegram
21 Jul 2026
post image

ಬೆಳ್ತಂಗಡಿ: ಮ್ಯಾಟ್ರಿಮೋನಿ ವೆಬ್‌ಸೈಟ್ ಮೂಲಕ ಪರಿಚಯವಾಗಿ ಮದುವೆಯಾಗುವುದಾಗಿ ನಂಬಿಸಿ ಉದ್ಯಮಿಯೊಬ್ಬರಿಂದ ₹87.22 ಲಕ್ಷಕ್ಕೂ ಅಧಿಕ ಹಣ ಪಡೆದು ವಂಚಿಸಿದ ಘಟನೆ ಬೆಳ್ತಂಗಡಿಯಲ್ಲಿ ಬೆಳಕಿಗೆ ಬಂದಿದೆ.

ಪೊಲೀಸರ ಮಾಹಿತಿ ಪ್ರಕಾರ, ಬೆಳ್ತಂಗಡಿ ನಿವಾಸಿಯಾದ ಉದ್ಯಮಿಗೆ 2024ರ ಮೇ ತಿಂಗಳಲ್ಲಿ ಮ್ಯಾಟ್ರಿಮೋನಿ ವೆಬ್‌ಸೈಟ್ ಮೂಲಕ ಅನಿಷಾ ಪಾಲನ್ನ (35) ಎಂಬ ಮಹಿಳೆಯ ಪರಿಚಯವಾಗಿತ್ತು. ಬಳಿಕ ಇಬ್ಬರೂ ಇನ್‌ಸ್ಟಾಗ್ರಾಂ ಹಾಗೂ ಮೊಬೈಲ್ ಮೂಲಕ ನಿರಂತರ ಸಂಪರ್ಕದಲ್ಲಿದ್ದರು.

ಮದುವೆಯಾಗುವುದಾಗಿ ನಂಬಿಸಿದ ಆರೋಪಿತೆ ವಿವಿಧ ಕಾರಣಗಳನ್ನು ನೀಡಿ ಹಂತ ಹಂತವಾಗಿ ದೂರುದಾರರಿಂದ ವಿವಿಧ ಬ್ಯಾಂಕ್ ಖಾತೆಗಳಿಗೆ ಒಟ್ಟು ₹87,22,710 ಹಣವನ್ನು ವರ್ಗಾಯಿಸಿಕೊಂಡಿದ್ದಾಳೆ ಎನ್ನಲಾಗಿದೆ. ಬಳಿಕ ಆಕೆ ಮೊಬೈಲ್ ಸಂಪರ್ಕ ಕಡಿತಗೊಳಿಸಿ, ಪಡೆದ ಹಣವನ್ನು ಹಿಂದಿರುಗಿಸದೆ ವಂಚಿಸಿರುವುದಾಗಿ ಉದ್ಯಮಿ ಪೊಲೀಸರಿಗೆ ದೂರು ನೀಡಿದ್ದಾರೆ.

ದೂರಿನ ಆಧಾರದಲ್ಲಿ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಅಪರಾಧ ಸಂಖ್ಯೆ 78/2026 ದಾಖಲಿಸಿಕೊಂಡಿದ್ದು, ಭಾರತೀಯ ನ್ಯಾಯ ಸಂಹಿತೆ (BNS)-2023ರ ಕಲಂ 318(4) ಅಡಿಯಲ್ಲಿ ಪ್ರಕರಣ ದಾಖಲಿಸಿ ಪೊಲೀಸರು ತನಿಖೆ ಮುಂದುವರಿಸಿದ್ದಾರೆ.

WhatsApp Image 2026-06-24 at 10.46.16 PM.jpeg
WhatsApp Image 2026-06-24 at 10.51.40 PM.jpeg
IMG_5455.jpg.jpeg
Aadya 26.jpg.jpeg
WhatsApp Image 2025-03-24 at 6.54.49 AM.jpeg
About Us

ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.

9900402699, 7899167180

© 2021 Suddi Sanchalana. All Rights Reserved.