



ಉಡುಪಿ ಜುಲೈ 16: ರಾಜ್ಯ ಸರ್ಕಾರದ ಆದೇಶದಂತೆ, ಕೆಲಸದ ಸ್ಥಳದಲ್ಲಿ ಮಹಿಳೆಯರ ಮೇಲೆ ಲೈಂಗಿಕ ಕಿರುಕುಳ ಅಧಿನಿಯಮ 2013 ರನ್ವಯ ಕೆಲಸ ಮಾಡುವ ಸ್ಥಳಗಳಲ್ಲಿ ಮಹಿಳೆಯರ ಮೇಲೆ ನಡೆಯುವ ಲೈಂಗಿಕ ಕಿರುಕುಳಗಳನ್ನು ತಡೆಯಲು ಜಿಲ್ಲಾ ಮಟ್ಟದ ಸ್ಥಳೀಯ ದೂರು ಸಮಿತಿಯನ್ನು ರಚಿಸಬೇಕಾಗಿರುತ್ತದೆ.
ಸಮಿತಿಗೆ ಸಮಾಜ ಕಲ್ಯಾಣ ಕ್ಷೇತ್ರದಲ್ಲಿ ಸಮರ್ಥರಾದ ಮತ್ತು ಮಹಿಳೆಯರ ಅಭ್ಯುದಯಕ್ಕೆ ಕಾರಣರಾದ ವ್ಯಕ್ತಿಗಳ ಪೈಕಿ ಒಬ್ಬ ಮಹಿಳೆಯನ್ನು ಅಧ್ಯಕ್ಷರನ್ನಾಗಿ ಹಾಗೂ ಸರ್ಕಾರೇತರ ಸಂಸ್ಥೆಗಳಿoದ ಅಥವಾ ಮಹಿಳೆಯರ ಅಭ್ಯುದಯಕ್ಕೆ ಕಾರಣರಾದ ಸಂಘಟನೆಗಳನ್ನು ರಚಿಸಿರುವ ಅಥವಾ ಲೈಂಗಿಕ ಕಿರುಕುಳದ ವಿಷಯಕ್ಕೆ ಸಂಬoಧಿಸಿದoತೆ ನಿಗಧಿಪಡಿಸಬಹುದಾದ ಜ್ಞಾನ ಹೊಂದಿರುವ ಇಬ್ಬರನ್ನು ಸದಸ್ಯರನ್ನಾಗಿ ಆಯ್ಕೆ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.
ಅರ್ಜಿ ಸಲ್ಲಿಸಲು ಜುಲೈ 31 ಕೊನೆಯ ದಿನ. ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ ಉಪನಿರ್ದೇಶಕರ ಕಚೇರಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ರಜತಾದ್ರಿ, ಮಣಿಪಾಲ ದೂರವಾಣಿ ಸಂಖ್ಯೆ: 0820-2574978 ಅನ್ನು ಕಚೇರಿ ವೇಳೆಯಲ್ಲಿ ಸಂಪರ್ಕಿಸುವoತೆ ಇಲಾಖೆಯ ಪ್ರಕಟಣೆ ತಿಳಿಸಿದೆ.
ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.
© 2021 Suddi Sanchalana. All Rights Reserved.