



ಉಡುಪಿ,: ಕರ್ನಾಟಕ ವಿಶ್ವಕರ್ಮ ಸಮುದಾಯಗಳ ಅಭಿವೃದ್ಧಿ ನಿಗಮದ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಪಂಚವೃತ್ತಿ ಅಭಿವೃದ್ಧಿಗಾಗಿ ಆರ್ಥಿಕ ನೆರವು, ಸ್ವಯಂ ಉದ್ಯೋಗ ನೇರಸಾಲ ಯೋಜನೆ, ಅರಿವು ಶೈಕ್ಷಣಿಕ ನೇರಸಾಲ ಯೋಜನೆ ಹೊಸದು ಹಾಗೂ ನವೀಕರಣ, ಗಂಗಾಕಲ್ಯಾಣ ಯೋಜನೆ, ಸ್ವಯಂ ಉದ್ಯೋಗ ನೇರ ಸಾಲ ಯೋಜನೆ, ಸ್ವಾವಲಂಬಿ ಸಾರಥಿ ಯೋಜನೆ ಹಾಗೂ ವಿದೇಶಿ ವ್ಯಾಸಾಂಗ ಯೋಜನೆಯಡಿ ಸಾಲ ಸೌಲಭ್ಯ ಪಡೆಯಲು ಸೇವಾಸಿಂಧು ಪೋರ್ಟಲ್ ಅಡಿ ಗ್ರಾಮ ಒನ್, ಬೆಂಗಳೂರು ಒನ್, ಕರ್ನಾಟಕ ಒನ್, ಅಟಲ್ ಜಿ ಜನಸ್ನೇಹಿ ಕೇಂದ್ರ ಮತ್ತು ನಾಗರೀಕ ಸೇವಾ ಕೇಂದ್ರಗಳಲ್ಲಿ ಹಾಗೂ ಸ್ವಾತಂತ್ರ್ಯ ಅಮೃತ ಮುನ್ನಡೆ ಯೋಜನೆಯಡಿ ಸಾಲ ಸೌಲಭ್ಯ ಪಡೆಯಲು www.kaushalkar.com ನಲ್ಲಿ ಅರ್ಹ ಫಲಾಪೇಕ್ಷಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ಅಕ್ಟೋಬರ್ 31 ಕೊನೆಯ ದಿನ. ಹೆಚ್ಚಿನ ಮಾಹಿತಿಗಾಗಿ ನಿಗಮದ ವೆಬ್‌ಸೈಟ್ https://kvcdcl.karnataka.gov.in ಅಥವಾ ನಿಗಮದ ಕೇಮದ್ರ ಕಚೇರಿಯ ದೂ.ಸಂಖ್ಯೆ: 080-22374848, ಮೊ.ನಂ: 7899899039 ಹಾಗೂ ಜಿಲ್ಲಾ ವ್ಯವಸ್ಥಾಪಕರು, ಡಿ. ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮ ದೂ.ಸಂಖ್ಯೆ: 0820-2574882 ಅನ್ನು ಸಂಪರ್ಕಿಸಬಹುದಾಗಿದೆ ಎಂದು ನಿಗಮದ ಜಿಲ್ಲಾ ವ್ಯವಸ್ಥಾಪಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.
© 2021 Suddi Sanchalana. All Rights Reserved.