logo
WhatsApp Image 2026-04-02 at 14.46.04.jpeg
hindalco everlast.jpeg

ಸಾವಯವ ಸಿರಿ ಅನುಷ್ಠಾನಕ್ಕೆ ಅರ್ಜಿ ಆಹ್ವಾನ

ಟ್ರೆಂಡಿಂಗ್
share whatsappshare facebookshare telegram
3 Mar 2022
post image

ಉಡುಪಿ,:: ಕೃಷಿ ಇಲಾಖೆಯ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಜಿಲ್ಲೆಯಲ್ಲಿ ಹೊಸ ಸಾವಯುವ ಕೃಷಿ ಉತ್ತೇಜನಗೊಳಿಸಲು, ಜನರಿಗೆ ಆರೋಗ್ಯಕರ ಹಾಗೂ ರಾಸಾಯನಿಕ ಮುಕ್ತ ಕೃಷಿ ಮತ್ತು ತೋಟಗಾರಿಕೆ ಉತ್ಪನ್ನಗಳನ್ನು ದೊರಕಿಸಲು ಸಾವಯವ ಸಿರಿ ಯೋಜನೆಯನ್ನು ಅನುಷ್ಟಾನಗೊಳಿಸಲಾಗಿರುತ್ತದೆ. ಸಾವಯವ ಕೃಷಿಯಲ್ಲಿ ಸಕ್ರೀಯವಾಗಿ ತೊಡಗಿಸಿಕೊಂಡಿರುವ ಹಾಗೂ 10 ವರ್ಷಗಳ ಅನುಭವವುಳ್ಳ ಟ್ರಸ್ಟ್ ಹಾಗೂ ಸೊಸೈಟಿ ಕಾಯಿದೆಯಡಿ ನೋಂದಾಯಿತ ಸಾವಯವ ಕೃಷಿಕರ ಸಂಘ, ಸಾವಯವ ಒಕ್ಕೂಟ ಅಥವಾ ಸಾವಯವ ಗುಂಪುಗಳು ಈ ಯೋಜನೆಗೆ ಅರ್ಜಿ ಸಲ್ಲಿಸಬಹುದಾಗಿದೆ. ಅರ್ಜಿ ಸಲ್ಲಿಸಲು ಮಾರ್ಚ್ 17 ಕೊನೆಯ ದಿನ. ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ ಸಹಾಯಕ ಕೃಷಿ ನಿರ್ದೇಶಕರು, ಉಡುಪಿ ಕಚೇರಿಯನ್ನು ಸಂಪರ್ಕಿಸುವAತೆ ಉಡುಪಿ ತಾಲೂಕು ಸಹಾಯಕ ಕೃಷಿ ನಿರ್ದೇಶಕರ ಕಚೇರಿ ಪ್ರಕಟಣೆ ತಿಳಿಸಿದೆ.

Aadya 26.jpg.jpeg
WhatsApp Image 2025-03-24 at 6.54.49 AM.jpeg
About Us

ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.

9900402699, 7899167180

© 2021 Suddi Sanchalana. All Rights Reserved.