



ನವದೆಹಲಿ: ರಾಜಸ್ಥಾನ ರಾಯಲ್ಸ್ ವಿರುದ್ಧ ಬುಧವಾರ ನಡೆದಿದ್ದ ಪಂದ್ಯದಲ್ಲಿ ಲಖನೌ ಸೂಪರ್ ಜೈಂಟ್ಸ್ ತಂಡ ನಿಧಾನಗತಿಯಲ್ಲಿ ಓವರುಗಳನ್ನು ಮಾಡಿದ್ದಕ್ಕೆ ನಾಯಕ ಕೆ.ಎಲ್.ರಾಹುಲ್ ಅವರಿಗೆ 12 ಲಕ್ಷ ದಂಡ ವಿಧಿಸಲಾಗಿದೆ.
ಈ ಪಂದ್ಯದಲ್ಲಿ ರಾಜಸ್ಥಾನ ರಾಯಲ್ಸ್ ವಿರುದ್ಧ ಲಖನೌ ಸೂಪರ್ ಜೈಂಟ್ಸ್ 10 ರನ್‌ಗಳಿಂದ ಗೆಲುವು ಸಾಧಿಸಿತ್ತು.
ಕನಿಷ್ಠ ಓವರುಗಳ ದರಕ್ಕೆ ಸಂಬಂಧಿಸಿದಂತೆ ರಾಹುಲ್ ಮೊದಲ ಬಾರಿ ತಪ್ಪೆಸಗಿದ ಕಾರಣ ಅವರಿಗೆ 12 ಲಕ್ಷ ದಂಡ ವಿಧಿಸಲಾಗಿದೆ ಎಂದು ಐಪಿಎಲ್ ಪ್ರಕಟಣೆ ತಿಳಿಸಿದೆ.
ಜೈಪುರದ ಸವಾಯ್ ಮಾನಸಿಂಗ್ ಕ್ರೀಡಾಂಗಣದಲ್ಲಿ ನಡೆದ ಐಪಿಎಲ್ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಲಖನೌ, ನಿಗದಿತ ಓವರ್‌ಗಳಲ್ಲಿ 7 ವಿಕೆಟ್ ಕಳೆದುಕೊಂಡು 154 ರನ್ ಗಳಿಸಿತ್ತು. ಆ ಬಳಿಕ ಶಿಸ್ತುಬದ್ಧ ದಾಳಿ ನಡೆಸಿ ರಾಜಸ್ಥಾನ ತಂಡವನ್ನು 6 ವಿಕೆಟ್‌ಗಳಿಗೆ 144 ರನ್‌ಗಳಿಗೆ ನಿಯಂತ್ರಿಸಿತ್ತು.
ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.
© 2021 Suddi Sanchalana. All Rights Reserved.