logo
WhatsApp Image 2026-04-02 at 14.46.04.jpeg
hindalco everlast.jpeg

174 ಪ್ರಯಾಣಿಕರ ಜೀವ ಉಳಿಸಿದ ಭಾರತೀಯ ಪೈಲಟ್‌ಗೆ ಇಸ್ರೇಲ್‌ನ ಶೌರ್ಯ ಪ್ರಶಸ್ತಿ ಘೋಷಣೆ

ಟ್ರೆಂಡಿಂಗ್
share whatsappshare facebookshare telegram
9 Oct 2026
post image

ಜೆರುಸಲೇಂ: ಫ್ಲೈದುಬೈ ವಿಮಾನದಲ್ಲಿ ಸಂಭವಿಸಬಹುದಾಗಿದ್ದ ಭೀಕರ ಅವಘಡವನ್ನು ತಪ್ಪಿಸಿ 174 ಪ್ರಯಾಣಿಕರು ಹಾಗೂ ಸಿಬ್ಬಂದಿಯ ಜೀವ ಉಳಿಸಿದ ಭಾರತೀಯ ಪೈಲಟ್ ಕ್ಯಾಪ್ಟನ್ ಸ್ಮಿತ್ ಮಚ್ಚಾರ್ ಅವರಿಗೆ ಇಸ್ರೇಲ್ ಶೌರ್ಯ ಪ್ರಶಸ್ತಿ ಘೋಷಿಸಿದೆ.

ಇಸ್ರೇಲ್ ಅಧ್ಯಕ್ಷ ಐಸಾಕ್ ಹೆರ್ಜಾಗ್ ಅವರು ‘ಪ್ರೆಸಿಡೆನ್ಶಿಯಲ್ ಅವಾರ್ಡ್ ಫಾರ್ ಹೀರೋಯಿಸಂ’ (Presidential Award for Heroism) ಪ್ರಶಸ್ತಿಯನ್ನು ಕ್ಯಾಪ್ಟನ್ ಸ್ಮಿತ್ ಮಚ್ಚಾರ್ ಅವರಿಗೆ ನೀಡುವುದಾಗಿ ಘೋಷಿಸಿದ್ದಾರೆ. ಪೈಲಟ್ ಸಂಪೂರ್ಣ ಗುಣಮುಖರಾದ ಬಳಿಕ ಪ್ರಶಸ್ತಿ ಪ್ರದಾನ ಮಾಡಲಾಗುವುದು ಎಂದು ಅವರು ತಿಳಿಸಿದ್ದಾರೆ.

ವಿಮಾನದ ಕಾಕ್‌ಪಿಟ್‌ನಲ್ಲಿದ್ದಾಗ ಓಮನ್ ಪ್ರಜೆಯಾದ ಸಹ-ಪೈಲಟ್ ಹಮ್ಮಮ್ ಅಲ್-ಹಮ್ಮಮಿ ಕೊಡಲಿಯಿಂದ ಸ್ಮಿತ್ ಮಚ್ಚಾರ್ ಅವರ ಮೇಲೆ ಹಲ್ಲೆ ನಡೆಸಿ ವಿಮಾನ ಪತನಗೊಳಿಸಲು ಯತ್ನಿಸಿದ್ದ ಎನ್ನಲಾಗಿದೆ. ಈ ದಾಳಿಯಲ್ಲಿ ಗಂಭೀರವಾಗಿ ಗಾಯಗೊಂಡು ತೀವ್ರ ರಕ್ತಸ್ರಾವವಾಗುತ್ತಿದ್ದರೂ, ಕ್ಯಾಪ್ಟನ್ ಮಚ್ಚಾರ್ ಧೈರ್ಯದಿಂದ ಕಾಕ್‌ಪಿಟ್ ಬಾಗಿಲು ತೆರೆದರು. ಇದರಿಂದ ವಿಮಾನದಲ್ಲಿದ್ದ ಇಸ್ರೇಲಿ ಪ್ರಯಾಣಿಕರು ಕಾಕ್‌ಪಿಟ್‌ಗೆ ಪ್ರವೇಶಿಸಿ ಹಲ್ಲೆ ನಡೆಸಿದ ವ್ಯಕ್ತಿಯನ್ನು ನಿಯಂತ್ರಣಕ್ಕೆ ಪಡೆಯಲು ಸಾಧ್ಯವಾಯಿತು ಎಂದು ವರದಿಯಾಗಿದೆ.

ಗಂಭೀರವಾಗಿ ಗಾಯಗೊಂಡಿರುವ ಭಾರತೀಯ ಪೈಲಟ್ ಸದ್ಯ ಯುಎಇಯ ಆಸ್ಪತ್ರೆಯೊಂದರಲ್ಲಿ ಚಿಕಿತ್ಸೆ ಪಡೆದು ಚೇತರಿಸಿಕೊಳ್ಳುತ್ತಿದ್ದಾರೆ.

ಕ್ಯಾಪ್ಟನ್ ಮಚ್ಚಾರ್ ಅವರ ಸಾಹಸವನ್ನು ಶ್ಲಾಘಿಸಿರುವ ಇಸ್ರೇಲ್ ಅಧ್ಯಕ್ಷ ಐಸಾಕ್ ಹೆರ್ಜಾಗ್, ಅವರ ಅಸಾಧಾರಣ ಧೈರ್ಯ ಮತ್ತು ವೃತ್ತಿಪರತೆಯಿಂದ ದೊಡ್ಡ ದುರಂತವೊಂದು ತಪ್ಪಿದೆ ಎಂದು ಹೇಳಿದ್ದಾರೆ. ಅವರು ಶೀಘ್ರವಾಗಿ ಸಂಪೂರ್ಣ ಗುಣಮುಖರಾಗಲಿ ಎಂದು ಹಾರೈಸಿರುವ ಅಧ್ಯಕ್ಷರು, ಇಸ್ರೇಲ್ ಜನರ ಪರವಾಗಿ ಅವರಿಗೆ ನಾಗರಿಕ ಶೌರ್ಯಕ್ಕಾಗಿ ನೀಡುವ ಅಧ್ಯಕ್ಷೀಯ ಪ್ರಶಸ್ತಿಯನ್ನು ಪ್ರದಾನ ಮಾಡಲು ಹೆಮ್ಮೆಪಡುತ್ತೇನೆ ಎಂದು ತಿಳಿಸಿದ್ದಾರೆ.

WhatsApp Image 2026-06-24 at 10.46.16 PM.jpeg
WhatsApp Image 2026-06-24 at 10.51.40 PM.jpeg
IMG_5455.jpg.jpeg
Aadya 26.jpg.jpeg
WhatsApp Image 2025-03-24 at 6.54.49 AM.jpeg
About Us

ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.

9900402699, 7899167180

© 2021 Suddi Sanchalana. All Rights Reserved.