



ಉಡುಪಿ: ಮೀನುಗಾರಿಕೆ ಇಲಾಖೆಯ ಕೇಂದ್ರ ಪುರಸ್ಕೃತ ಉಳಿತಾಯ ಪರಿಹಾರ ಯೋಜನೆ ಮತ್ತು ಕೋವಿಡ್ ಆರ್ಥಿಕ ಪ್ಯಾಕೇಜ್ ಪರಿಹಾರ ಯೋಜನೆಗಳಿಗೆ, ಫಲಾನುಭವಿಗಳು ಡಿ.ಬಿ.ಟಿ ತಂತ್ರಾಂಶದಲ್ಲಿ ನೋಂದಣಿ ಆಗಬೇಕಾಗಿರುತ್ತದೆ.
ಡಿ.ಬಿ.ಟಿ ತಂತ್ರಾಂಶವು ಆಧಾರ್ ಅವಲಂಬಿತವಾಗಿರುವುದರಿಂದ ಫಲಾನುಭವಿಗಳು ತಮ್ಮ ಬ್ಯಾಂಕ್ ಖಾತೆಗೆ ಆಧಾರ್ ಸಂಖ್ಯೆಯನ್ನು ಸೀಡ್ ಮಾಡಿಸುವುದು ಕಡ್ಡಾಯವಾಗಿದ್ದು, ಸದರಿ ತಂತ್ರಾಂಶದಲ್ಲಿ ಈಗಾಗಲೇ ಸಹಾಯಧನ/ಪರಿಹಾರ ಮೊತ್ತವನ್ನು ಪಾವತಿಸಲು ಕ್ರಮ ವಹಿಸಲಾಗುತ್ತಿದೆ.
ಅನೇಕ ಫಲಾನುಭವಿಗಳ ಖಾತೆ ಬ್ಯಾಂಕ್ A/c No ಆಧಾರ್ ಲಿಂಕ್ ಆಗದಿರುವುದರಿಂದ ಹಣ ಪಾವತಿಸಲು ಸಾಧ್ಯವಾಗಿರುವುದಿಲ್ಲ. ಹಾಗಾಗಿ ಈ ಫಲಾನುಭವಿಗಳು ತಮ್ಮ ಬ್ಯಾಂಕ್ ಶಾಖೆಗಳಿಗೆ ತೆರಳಿ ತಮ್ಮ ಆಧಾರ್ ಸಂಖ್ಯೆಯನ್ನು ಬ್ಯಾಂಕ್ ಖಾತೆಯೊಂದಿಗೆ ಸೀಡಿಂಗ್ ಮಾಡಿಸಲು ಕ್ರಮ ವಹಿಸುವಂತೆ ಉಡುಪಿ ಮೀನುಗಾರಿಕೆ ಇಲಾಖೆಯ ಜಂಟಿ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.
© 2021 Suddi Sanchalana. All Rights Reserved.