



ಬೆಂಗಳೂರು: ತೆರಿಗೆ ವಂಚನೆ, ಅಕ್ರಮ ಹಣ ವರ್ಗಾವಣೆ ಆರೋಪದ ಮೇಲೆ ಮಾಜಿ ಸಿಎಂ, ಬಿಜೆಪಿ ಹಿರಿಯ ನಾಯಕ ಬಿ.ಎಸ್. ಯಡಿಯೂರಪ್ಪ ಅವರ ಆಪ್ತನ ಮನೆ ಮೇಲೆ ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ಇಂದು ಬೆಳ್ಳಂಬೆಳಿಗ್ಗೆ ದಾಳಿ ನಡೆಸಿದ್ದಾರೆ.
ಬೆಂಗಳೂರಿನ ಭಾಷ್ಯಂ ಸರ್ಕಲ್‌ನಲ್ಲಿರುವ ಯಡಿಯೂರಪ್ಪ ಆಪ್ತ ಸಹಾಯಕ ಉಮೇಶ್ ಮನೆ ಮತ್ತು ಕಚೇರಿ ಸೇರಿ 4 ಕಡೆಗಳಲ್ಲಿ ಐಟಿ ದಾಳಿ ನಡೆದಿದೆ. ಉಪಾಧ್ಯಕ್ಷ ವಿಜಯೇಂದ್ರ ಮೂವರಿಗೂ ಪಿಎ ರೀತಿ ಕೆಲಸ ಮಾಡುತ್ತಿದ್ದರು. ರಾಘವೇಂದ್ರ ಬೆಂಗಳೂರಿಗೆ ಬಂದಾಗ ರಾಘವೇಂದ್ರ ಅವರ ಕೆಲಸಗಳ ನಿರ್ವಹಣೆ ಮಾಡುತ್ತಿದ್ದರು. ಯಡಿಯೂರಪ್ಪ ವಿಪಕ್ಷ ನಾಯಕರಾಗಿದ್ದಾಗ ಮತ್ತು ಮುಖ್ಯಮಂತ್ರಿ ಆಗಿದ್ದಾಗ ಅವರಿಗೆ ಉಮೇಶ್ ಪಿಎ ಆಗಿದ್ದರು.ಶಿವಮೊಗ್ಗ ಮೂಲದ ಉಮೇಶ್, ಬಾಷ್ಯಂ ಸರ್ಕಲ್ ನಲ್ಲಿ 15 x 40 ಅಳತೆಯ ಮನೆಯೊಂದರಲ್ಲಿ ಬಾಡಿಗೆಗೆ ಇದ್ದಾರೆ. ಈ ಮನೆಗೆ ಬಂದು ಸುಮಾರು 8 ವರ್ಷ ಆಗಿರಬಹುದು. ಆದರೆ ಇಷ್ಟು ಚಿಕ್ಕ ಮನೆಗೇ ಭಾರೀ ಪ್ರಮಾಣದ ಸರ್ಕಾರಿ ಭದ್ರತೆ ಹಾಕಿಸಿಕೊಂಡಿದ್ದರು. ಆಯನೂರು ಮೂಲದ ಉಮೇಶ್ ಅವರು ಆಯನೂರು ಮಂಜುನಾಥ್ ಅವರಿಗೆ ಮೊದಲು ಪಿಎ ಆಗಿದ್ದರು.
ಯಡಿಯೂರಪ್ಪ ಜೊತೆ 2008 ರಿಂದಲೂ ಇದ್ದಾರೆ. ಉಮೇಶ್ ಈಗಲೂ ಕೂಡ ಸರ್ಕಾರಿ ವಾಹನವನ್ನ ಬಳಸುತ್ತಿದ್ದಾರೆ. ವರ್ಗಾವಣೆ, ಕಡತ ವಿಲೇವಾರಿಯಂತಹ ಕೆಲಸ ಉಮೇಶ್ ಮಾಡುತ್ತಿದ್ದರು ಅನ್ನೋ ಆರೋಪಗಳು ಇವೆ. ನೀರಾವರಿ ಇಲಾಖೆಯ ಪ್ರಮುಖ ಕಡತಗಳನ್ನ ವಿಲೇವಾರಿ ಮಾಡುತ್ತಿದ್ದ ಅನ್ನೋ ಆರೋಪವೂ ಈತನ ಮೇಲಿದೆ
ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.
© 2021 Suddi Sanchalana. All Rights Reserved.