



ಬೆಂಗಳೂರು: ಶೋಭಾ ಡೆವಲಪರ್ಸ್ ಕೇಂದ್ರ ಕಚೇರಿ ಹಾಗೂ ಅದಕ್ಕೆ ಸಂಬಂಧಿಸಿದಂತೆ ಇತರ ಕಚೇರಿಗಳ ಮೇಲೆ ಸೋಮವಾರ ಬೆಳಗ್ಗೆ ಐಟಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ.
ಆದಾಯ ತೆರಿಗೆ ವಂಚನೆ ಹಿನ್ನೆಲೆ ಶೋಭಾ ಡೆವಲಪರ್ಸ್‌ಗೆ ಸಂಬಂಧಪಟ್ಟ ಬೆಂಗಳೂರಿನ ಕಚೇರಿಗಳ ಮೇಲೆ ಐಟಿ ದಾಳಿ ನಡೆಸಿದೆ. ವೈಟ್ ಫೀಲ್ಡ್ ರಸ್ತೆಯ ಹೂಡಿ, ಬನ್ನೇರುಘಟ್ಟ ರಸ್ತೆಯ ಅರಕೆರೆ ಬಳಿಯ ಕಚೇರಿಗಳ ಮೇಲೆ ದಾಳಿ ನಡೆಸಿದೆ.
ಸೋಮವಾರ ಬೆಳಗ್ಗೆ 8 ಗಂಟೆ ವೇಳೆಗೆ ಬೆಂಗಳೂರು ಹಾಗೂ ಚೆನ್ನೈ ವಿಭಾಗದ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಸುಮಾರು 50 ವಾಹನಗಳಲ್ಲಿ ಐಟಿ ಅಧಿಕಾರಿಗಳು ಆಗಮಿಸಿದ್ದಾರೆ. 10 ಅಧಿಕಾರಿಗಳನ್ನೊಳಗೊಂಡ 5 ತಂಡಗಳಿಂದ ಏಕಕಾಲಕ್ಕೆ ವಿವಿಧೆಡೆ ದಾಳಿ ನಡೆಸಿದ್ದಾರೆ. ಅಧಿಕಾರಿಗಳು ಶೋಭಾ ಡೆವಲಪರ್ಸ್‌ಗೆ ಸಂಬಂಧಪಟ್ಟ ಕಚೇರಿಗಳಲ್ಲಿ ಕಡತಗಳನ್ನು ಪರಿಶೀಲನೆ ನಡೆಸುತ್ತಿದ್ದಾರೆ.
ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.
© 2021 Suddi Sanchalana. All Rights Reserved.