



ಉಡುಪಿ; ನಗರದ ಮಣಿಪಾಲ ಸರಕಾರಿ ಕೈಗಾರಿಕಾ ತರಬೇತಿ ಸಂಸ್ಥೆಯಲ್ಲಿ ಫಿಟ್ಟರ್, ಸಿ.ಓ.ಪಿ.ಎ ಮತ್ತು ಮೆಕ್ಯಾನಿಕ್ ಡೀಸೆಲ್ (ಆಟೋ ಮೊಬೈಲ್) ಕೋರ್ಸುಗಳ ಪ್ರವೇಶಾತಿಗಾಗಿ ಎಸ್.ಎಸ್.ಎಲ್.ಸಿ ಉತ್ತೀರ್ಣ ಹಾಗೂ ಪಿ.ಯು.ಸಿ ಅನುತ್ತೀರ್ಣ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.
ಅರ್ಹ ಅಭ್ಯರ್ಥಿಗಳು ಜುಲೈ 31 ರ ಒಳಗೆ ಖುದ್ದಾಗಿ ಸಂಸ್ಥೆಗೆ ಹಾಜರಾಗಿ ಸೂಕ್ತ ದಾಖಲಾತಿಗಳೊಂದಿಗೆ ಅರ್ಜಿ ಸಲ್ಲಿಸಬಹುದಾಗಿದೆ.
ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ ಪ್ರಾಚಾರ್ಯರು, ಸರಕಾರಿ ಕೈಗಾರಿಕಾ ತರಬೇತಿ ಸಂಸ್ಥೆ, ಪ್ರಗತಿನಗರ, ಮಣಿಪಾಲ ಉಡುಪಿ ದೂ.ಸಂಖ್ಯೆ: 0820-2986145, ಮೊ.ನಂ: 9964247101, 9902001790, 9535270498 ಹಾಗೂ 9738439619 ಅನ್ನು ಸಂಪರ್ಕಿಸುವಂತೆ ಸಂಸ್ಥೆಯ ಪ್ರಾಚಾರ್ಯರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.
© 2021 Suddi Sanchalana. All Rights Reserved.