logo
WhatsApp Image 2025-08-20 at 6.11.39 PM - Copy.jpeg
SHARADA TECHERS.jpeg
hindalco everlast.jpeg

ಸಂಭ್ರಮದಿಂದ ನೆರವೇರಿತು ಹೆಮ್ಮಾಡಿ ಜನತಾ ಪದವಿಪೂರ್ವ ಕಾಲೇಜಿನ ವಾರ್ಷಿಕ ಸಂಭ್ರಮ ಜನತಾ ಪರ್ವ 2K24.

ಟ್ರೆಂಡಿಂಗ್
share whatsappshare facebookshare telegram
16 Nov 2024
post image

ಹೆಮ್ಮಾಡಿ: ಜನತಾ ಪದವಿಪೂರ್ವ ಕಾಲೇಜಿನ ವಾರ್ಷಿಕ ಸಂಭ್ರಮ ದಿನಾಂಕ: 14-11-2024ರಂದು ಅದ್ದೂರಿಯಾಗಿ ನೆರವೇರಿತು. ಕಾರ್ಯಕ್ರಮ ಉದ್ಘಾಟಿಸಿದ ಗಂಗೊಳ್ಳಿಯ ಟೌನ್ ಸೌಹಾರ್ದ ಕೋ-ಆಪರೇಟಿವ್ ಸೊಸೈಟಿ ಲಿಮಿಟೆಡ್ ಇದರ ಅಧ್ಯಕ್ಷರಾದ ಶ್ರೀ ಜಿ. ವೆಂಕಟೇಶ ಶೆಣೈ ಕಾರ್ಯಕ್ರಮವನ್ನು ಉದ್ಘಾಟಿಸಿ 'ಜನತಾ ವಿದ್ಯಾ ಸಂಸ್ಥೆಯ ಶೈಕ್ಷಣಿಕ ಸಾಧನೆ ಮಹತ್ತರವಾದದ್ದು,ವಿದ್ಯಾರ್ಥಿಗಳ ಪ್ರತಿಭೆಯ ವಿಕಾಸಕ್ಕೆ ಜನತಾ ಸಂಸ್ಥೆಯ ಕಾರ್ಯಚಟುವಟಿಕೆಗಳು ಪ್ರಶಂಸನೀಯ' ಎಂದರು.

ಸಮಾರಂಭದ ಅಧ್ಯಕ್ಷತೆಯನ್ನು ವಹಿಸಿದ ಜನತಾ ಸಮೂಹ ಶಿಕ್ಷಣ ಸಂಸ್ಥೆಗಳ ಆಡಳಿತ ಮಂಡಳಿಯ ಅಧ್ಯಕ್ಷರು ಹಾಗೂ ಪ್ರಾಂಶುಪಾಲರಾದ ಶ್ರೀ ಗಣೇಶ ಮೊಗವೀರರವರು ಕಾಲೇಜಿನ ವಾರ್ಷಿಕ ವರದಿ ವಾಚನ ಮಾಡಿ, ಶಿಕ್ಷಣ, ಕ್ರೀಡೆ,ಕಲೆ,ಸಾಂಸ್ಕೃತಿಕ, ಸಾಹಿತ್ಯಕ ಈ ಎಲ್ಲಾ ಕ್ಷೇತ್ರಗಳಲ್ಲಿ ನಮ್ಮ ವಿದ್ಯಾರ್ಥಿಗಳ ಸಾಧನೆ ಮಹತ್ತರವಾಗಿದೆ,ವಿದ್ಯಾರ್ಥಿಗಳ ಸರ್ವತೋಮುಖ ಬೆಳವಣಿಗೆಗಾಗಿ ಅಹರ್ನಿಶಿ ಶ್ರಮಿಸುತ್ತಿದ್ದೇವೆ. ವಿದ್ಯಾರ್ಥಿಗಳೇ ನಿಮ್ಮ ಭವಿಷ್ಯ ಉಜ್ವಲಿಸಲಿ ಎಂದು ಶುಭ ಹಾರೈಸಿದರು.

ಕುಂದಾಪುರದ ಭಂಡಾರ್ಕಾರ್ಸ್ ಪದವಿಪೂರ್ವ ಕಾಲೇಜಿನ ಪ್ರಾಂಶುಪಾಲರಾದ ಶ್ರೀ ಜಿ.ಎಮ್.ಗೊಂಡರವರು ಕಾಲೇಜಿನ ವಾರ್ಷಿಕ ಸಂಚಿಕೆ 'ಜನತಾ ಜ್ಞಾನ-ತರಂಗ' ಅನಾವರಣಗೊಳಿಸಿ,ವಿದ್ಯಾರ್ಥಿಗಳ ಪ್ರತಿಭಾ ಹಂದರಕ್ಕೆ ಜನತಾ ಶಿಕ್ಷಣ ಸಂಸ್ಥೆಯ ಪಾತ್ರ ಬಹು ದೊಡ್ಡದು,ಅಕ್ಷರ ಲೋಕವನ್ನು ದಾಖಲಿಸಲು, ವಿದ್ಯಾರ್ಥಿ ಬರೆವಣಿಗೆಯ ಸಾಮರ್ಥ್ಯವನ್ನು ಹೆಚ್ಚಿಸಲು ವಿದ್ಯಾರ್ಥಿ ಸಂಚಿಕೆಯನ್ನು ಹೊರ ತಂದಿರುವ ಕಾರ್ಯ ಶ್ಲಾಘನೀಯ ಎಂದರು.

ಮುಖ್ಯ ಅತಿಥಿಯಾಗಿ ಆಗಮಿಸಿದ ಹೆಮ್ಮಾಡಿ ಮೀನುಗಾರರ ಪ್ರಾಥಮಿಕ ಸಹಕಾರಿ ಸಂಘ ನಿಯಮಿತ ಇದರ ಕಾರ್ಯನಿರ್ವಹಣಾಧಿಕಾರಿಗಳು ಹಾಗೂ 2024ನೇ ಸಾಲಿನ ಉಡುಪಿ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತರಾದ ಶ್ರೀ ಉದಯ ಕುಮಾರ್ ಹಟ್ಟಿಯಂಗಡಿಯವರು ಮಾತನಾಡಿ 'ವಿದ್ಯಾರ್ಥಿಗಳೇ ಪದವಿಪೂರ್ವ ಶಿಕ್ಷಣಕ್ಕೆ ಜನತಾ ಸಂಸ್ಥೆಯ ಕೊಡುಗೆ ಬಹು ದೊಡ್ಡದು,ನಿಮ್ಮೆಲ್ಲರ ಭವಿಷ್ಯ ಉಜ್ವಲವಾಗಲಿ ಎಂದರು'. ಝೀ ವಾಹಿನಿಯ ಮಹಾನಟಿ ರಿಯಾಲಿಟಿ ಶೋ ಪೈನಲಿಸ್ಟ್ ಕುಮಾರಿ ಆರಾಧನ ಭಟ್ ಪ್ರತಿಭೆಗಳಿಗೆ ಅದ್ಭುತ ವೇದಿಕೆಯನ್ನು ಒದಗಿಸಿಕೊಡುತ್ತಿರುವ ಸಂಸ್ಥೆಯ ಕಾರ್ಯಕ್ಕೆ ಅಭಿನಂದಿಸಿ ವಿದ್ಯಾರ್ಥಿ ಪ್ರತಿಭೆಗಳಿಗೆ ಶುಭ ಹಾರೈಸಿದರು.ಕುಂದಾಪುರದ ಹಾಸ್ಯ ಕಲಾವಿದರಾದ ಶ್ರೀ ನಾಗರಾಜ ತೆಕ್ಕಟ್ಟೆಯವರು ಮಾತನಾಡಿ ಪ್ರತಿಭೆ ಎಂದರೆ ಜನತಾ,ಜನತಾ ಎಂದರೆ ಪ್ರತಿಭೆಯನ್ನು ಬೆಳಗಿಸುವ ಮಹಾಮಂದಿರ ಎಂದು ಶುಭ ಹಾರೈಸಿದರು. ಕಾರ್ಯಕ್ರಮದಲ್ಲಿ ಜನತಾ ಪ್ರೌಢಶಾಲೆ ಹೆಮ್ಮಾಡಿಯ ಮುಖ್ಯ ಶಿಕ್ಷಕರಾದ ಶ್ರೀ ಮಂಜು ಕಾಳಾವರ,ಜನತಾ ಪದವಿಪೂರ್ವ ಕಾಲೇಜಿನ ಉಪ-ಪ್ರಾಂಶುಪಾಲರಾದ ಶ್ರೀ ರಮೇಶ ಪೂಜಾರಿ, ಜನತಾ ನ್ಯೂ ಇಂಗ್ಲೀಷ್ ಮೀಡಿಯಂ ಸ್ಕೂಲ್ ನ ಮುಖ್ಯ ಶಿಕ್ಷಕಿ ಕು|ದೀಪಿಕಾ ಆಚಾರ್ಯ ಉಪಸ್ಥಿತರಿದ್ದರು.ಶೈಕ್ಷಣಿಕ, ಸಾಂಸ್ಕೃತಿಕ, ಸಾಹಿತ್ಯಕ ಹಾಗೂ ಕ್ರೀಡಾ ವಿಭಾಗಗಳಲ್ಲಿ ಸಾಧನೆಗೈದ ವಿದ್ಯಾರ್ಥಿಗಳಿಗೆ ಅಭಿನಂದಿಸಲಾಯಿತು.ಅಪರಾಹ್ನದ ನಂತರ ಕಾಲೇಜಿನ ವಿದ್ಯಾರ್ಥಿಗಳಿಂದ ವೈಭವದ ಸಾಂಸ್ಕೃತಿಕ ಕಾರ್ಯಕ್ರಮ ನೆರವೇರಿತು.

ಕಾಲೇಜಿನ ಬೋಧಕ/ಬೋಧಕೇತರ ವ್ರಂದದವರು, ವಿದ್ಯಾರ್ಥಿಗಳು,ವಿದ್ಯಾರ್ಥಿ ಪೋಷಕರು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು. ಉಪ-ಪ್ರಾಂಶುಪಾಲರಾದ ಶ್ರೀ ರಮೇಶ ಪೂಜಾರಿ ಸ್ವಾಗತಿಸಿ, ಉಪನ್ಯಾಸಕ ಉದಯ ನಾಯ್ಕ ಕಾರ್ಯಕ್ರಮ ನಿರೂಪಿಸಿ,ಉಪನ್ಯಾಸಕಿ ಅಶ್ವಿನಿ ವಂದಿಸಿದರು.

Nudisiri Invitation Karkala-3_251125_112501_page-0001.jpg
Nudisiri Invitation Karkala-3_251125_112501_page-0002.jpg
WhatsApp Image 2025-10-28 at 20.32.23_e43aa502.jpg
WhatsApp Image 2025-10-09 at 20.22.41_774d43da.jpg
WhatsApp Image 2025-09-22 at 7.57.12 AM.jpeg
WhatsApp Image 2025-09-22 at 7.57.12 AM (1).jpeg
WhatsApp Image 2025-07-31 at 11.09.37 PM.jpeg
WhatsApp Image 2025-08-20 at 6.11.39 PM.jpeg
AADYA ELECTRONICS Back 11FINAL_page-0001.jpg
WhatsApp Image 2025-03-24 at 6.54.49 AM.jpeg
WhatsApp Image 2025-01-13 at 14.53.16 (1).jpeg
About Us

ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.

9900402699, 7899167180

© 2021 Suddi Sanchalana. All Rights Reserved.