



ಬೆಂಗಳೂರು: ಜಯದೇವ ಆಸ್ಪತ್ರೆ ನಿರ್ದೇಶಕರಾಗಿ ಡಾ. ಸಿ.ಎನ್. ಮಂಜುನಾಥ್ ಅವರು ಇನ್ನೂ 6 ತಿಂಗಳು ಸೇವಾವಧಿ ಮುಂದುವರೆಸುವಂತೆ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.
ಜುಲೈ 19ಕ್ಕೆ ಡಾ.ಸಿ.ಎನ್. ಮಂಜುನಾಥ್ ಸೇವಾವಧಿ ಮುಕ್ತಾಯ ಆಗಬೇಕಿತ್ತು. ಆದರೆ ಕಲಬುರಗಿ ಜಯದೇವ ಆಸ್ಪತ್ರೆಯ ಕೆಲಸ ಜವಾಬ್ದಾರಿ ಹಿನ್ನೆಲೆ ಜನವರಿ ತಿಂಗಳವರೆಗೆ ನಿರ್ದೇಶಕರಾಗಿ ಮುಂದುವರಿಯುವಂತೆ ವಿಧಾನಸೌಧದಲ್ಲಿ ಸಿಎಂ ಸಿದ್ದರಾಮಯ್ಯ ನೇತೃತ್ವದ ಸಭೆಯಲ್ಲಿ ತೀರ್ಮಾನ ಕೈಗೊಳ್ಳಲಾಗಿದೆ.
ಜಯದೇವ ಹೃದ್ರೋಗ ಆಸ್ಪತ್ರೆಯಲ್ಲಿ 2007ರಿಂದ ಡಾ.ಮಂಜುನಾಥ್ ನಿರ್ದೇಶಕರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಕಳೆದ ವರ್ಷವೇ ಡಾ.ಮಂಜುನಾಥ್ ಅಧಿಕಾರ ಅವಧಿ ಮುಕ್ತಾಯವಾಗಿತ್ತು. ಆದರೆ ರೋಗಿಗಳು ಮತ್ತು ಸಿಬ್ಬಂದಿ ಒತ್ತಾಯದ ಮೇರೆಗೆ 1 ವರ್ಷ ಮುಂದುವರಿಸಲಾಗಿತ್ತು. ಸದ್ಯ ಅದರಂತೆಯೇ ಇನ್ನೂ 6 ತಿಂಗಳು ನಿರ್ದೇಶಕರಾಗಿ ಮುಂದುವರೆಸುವಂತೆ ರಾಜ್ಯ ಸರ್ಕಾರ ಆದೇಶಿಸಿದೆ.
ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.
© 2021 Suddi Sanchalana. All Rights Reserved.