



ಕಾರ್ಕಳ: ದೇಶದ ಪ್ರತಿಷ್ಠಿತ ತಾಂತ್ರಿಕ ವಿಶ್ವವಿದ್ಯಾನಿಲಯಗಳಿಗೆ ಸೇರಬಯಸುವ ವಿದ್ಯಾರ್ಥಿಗಳಿಗೆ ನ್ಯಾಷನಲ್ ಟೆಸ್ಟಿಂಗ್ ಏಜೆನ್ಸಿ ನಡೆಸುವ ಜೆ.ಇ.ಇ (ಮೈನ್) 2025 ಅರ್ಹತಾ ಪರೀಕ್ಷೆಯ ಪ್ರಥಮ ಹಂತದ ಫಲಿತಾಂಶ ಪ್ರಕಟಗೊಂಡಿದ್ದು ಕ್ರಿಯೇಟಿವ್ ಶಿಕ್ಷಣ ಸಂಸ್ಥೆಯ ವಿದ್ಯಾರ್ಥಿಗಳು ಉತ್ತಮ ಸಾಧನೆಗೈದಿದ್ದಾರೆ.
ವಿದ್ಯಾರ್ಥಿಗಳಾದ ಚೇತನ್ ಗೌಡ ಎನ್.ಎಸ್ 99.4676491, ಸಾನಿಕ ಕೆ.ಎನ್ 99. 2028725, ಎಂ. ಮಂಜುನಾಥ್ 99.0174525, ಮೋಹಿತ್ ಎಂ 99.1632262, ಎಚ್. ಎ ರಾಜೇಶ್ 99.1055485, ಪರ್ಸಂಟೈಲ್ ಗಳಿಸಿರುತ್ತಾರೆ.
ಸಂಸ್ಥೆಯು ಆರಂಭದ ವರ್ಷದಿಂದಲೇ ಎಲ್ಲಾ ಸ್ಪರ್ಧಾತ್ಮಕ ಪರೀಕ್ಷೆಗಳಲ್ಲೂ ಉನ್ನತ ಫಲಿತಾಂಶ ಗಳಿಸುವ ಮೂಲಕ ಗುಣಾತ್ಮಕ ಶಿಕ್ಷಣಕ್ಕೆ ಹೆಸರುವಾಸಿಯಾಗಿದೆ.
ವಿದ್ಯಾರ್ಥಿಗಳ ಈ ಸಾಧನೆಗೆ ಕಾಲೇಜಿನ ಆಡಳಿತ ಮಂಡಳಿ, ಪ್ರಾಂಶುಪಾಲರು, ಉಪನ್ಯಾಸಕ ವರ್ಗದವರು, ಜೆ.ಇ.ಇ (ಮೈನ್) ಪರೀಕ್ಷೆಯ ಸಂಯೋಜಕರಾದ ನಂದೀಶ್ ಎಚ್. ಬಿ, ಆದಿತ್ಯ ವಟಿ ಕೆ ಮತ್ತು ವಿನಯ ಕುಮಾರ್‌ರವರು ಅಭಿನಂದನೆ ಸಲ್ಲಿಸಿದ್ದಾರೆ.





ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.
© 2021 Suddi Sanchalana. All Rights Reserved.