



ಕಾರ್ಕಳ: ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಅಧೀನದಲ್ಲಿರುವ ಕಾರ್ಕಳ ಯಕ್ಷರಂಗಾಯಣದ ನಿರ್ದೇಶಕರಾಗಿ ಹಿರಿಯ ರಂಗಕರ್ಮಿ ಜೀವನ್‌ರಾಂ ಸುಳ್ಯ ಅವರು ಇಂದು ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕಿ ಪೂರ್ಣಿಮಾ ಅವರಿಂದ ಅಧಿಕಾರ ಸ್ವೀಕರಿಸಿದರು. ಜೀವನ್‌ರಾಂ ಅವರು ಹಲವು ಬಾರಿ ರಾಷ್ಟ್ರೀಯ ಮಟ್ಟದ ನಾಟಕಗಳಲ್ಲಿ ಪ್ರಶಸ್ತಿ ಪಡೆದಿದ್ದು, ಅವರ ನಿರ್ದೇಶನದ ಮಹಾಮಾಯಿ, ಪಂಜರ ಶಾಲೆ, ಧೂತವಾಕ್ಯ ಹಾಗೂ ಇನ್ನಿತರ ಹಲವು ನಾಟಕಗಳು ಜನಪ್ರಿಯವಾಗಿದೆ. ಮೂಲತ: ಯಕ್ಷಗಾನ ಕುಟುಂಬದಿAದ ಬಂದ ಜೀವನ್‌ರಾಂ ನಾಟಕಗಳಲ್ಲಿ ಯಕ್ಷಗಾನ, ಜಾದೂ, ಜಾನಪದವನ್ನು ಅಳವಡಿಸಿದ ಜನಪ್ರಿಯ ನಿರ್ದೇಶಕರಾಗಿದ್ದಾರೆ.
ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.
© 2021 Suddi Sanchalana. All Rights Reserved.