



ಅಂತರ್ಜಾಲ ಅಪರಾಧಿಗಳ ಕುರಿತು ಅರಿವಿರಲಿ : ಶ್ರೀ ಸುಬ್ರಹ್ಮಣ್ಯ ಹರಕೆರಿ
ಕಾರ್ಕಳ: ಕಾರ್ಕಳ ಜ್ಞಾನಸುಧಾ ಆಂಗ್ಲ ಮಾಧ್ಯಮ ಶಾಲೆ ಮತ್ತು ಪ್ರೌಢಶಾಲೆಯಲ್ಲಿ ಪೋಷಕ ಶಿಕ್ಷಕರ ಸಭೆಯು ಆಗಸ್ಟ್ ೯, ೨೦೨೩ ರಂದು ನಡೆಯಿತು.
ಸಭೆಯ ವಿಶೇಷ ಅತಿಥಿ ಶ್ರೀ ಸುಬ್ರಹ್ಮಣ್ಯ ಹರಕೆರಿ ಉಪನಿರೀಕ್ಷಕರು, ತನಿಖೆ, ಕಾರ್ಕಳ ನಗರ ಪೊಲೀಸ್ ಠಾಣೆ, ಕಾರ್ಕಳ. ಇವರು ಸಮಾಜದಲ್ಲಿ ನಡೆಯುವಂತಹ ವಿವಿಧ ರೀತಿಯ ಅಂತರ್ಜಾಲ ಅಪರಾಧಗಳ ಕುರಿತು ನಮಗೆ ಅರಿವಿರಲಿ ಎಂದರು. ಸಂಸ್ಥೆಯ ಸಿ.ಇ.ಓ ಹಾಗೂ ಕಾರ್ಕಳ ಜ್ಷಾನಸುಧಾ ಪ.ಪೂ ಕಾಲೇಜಿನ ಪ್ರಾಂಶುಪಾಲರಾದ ಶ್ರೀ ದಿನೇಶ್ ಎಂ. ಕೊಡವೂರು ಉನ್ನತ ಶಿಕ್ಷಣದ ಕುರಿತು ವಿದ್ಯಾರ್ಥಿಗಳಿಗೆ ಮಾರ್ಗದರ್ಶನ ನೀಡಿದರು. ಕಾರ್ಕಳ ಜ್ಞಾನಸುಧಾ ಆಂಗ್ಲ ಮಾಧ್ಯಮ ಶಾಲೆ ಮತ್ತು ಪ್ರೌಢಶಾಲೆಯ ಪ್ರಾಂಶುಪಾಲರಾದ ಶ್ರೀಮತಿ ಉಷಾ ರಾವ್.ಯು ಪ್ರಾಸ್ತಾವಿಕ ನುಡಿಗಳನ್ನಾಡಿದರು. ಕಾರ್ಕಳ ಜ್ಞಾನಸುಧಾ ಆಂಗ್ಲ ಮಾಧ್ಯಮ ಪ್ರೌಢಶಾಲೆಯ ಉಪಪ್ರಾಂಶುಪಾಲರಾದ ಶ್ರೀಮತಿ ವಾಣಿ .ಕೆ ಹಾಗೂ ಅಜೆಕಾರು ಪದ್ಮಗೋಪಾಲ್ ಶಿಕ್ಷಣ ಸಂಸ್ಥೆಯ ಲೆಕ್ಕ ಪರಿಶೋಧಕರಾದ ಶ್ರೀ ಕೆ. ನಿತ್ಯಾನಂದ ಪ್ರಭು ಉಪಸ್ಥಿತರಿದ್ದರು. ಸಹ ಶಿಕ್ಷಕಿ ಶ್ರೀಮತಿ ಪ್ರಿಯ ಕಾರ್ಯಕ್ರಮ ನಿರೂಪಿಸಿದರು.
ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.
© 2021 Suddi Sanchalana. All Rights Reserved.