



KPSC Junior account assistant : ಸೆಕೆಂಡ್ ಪಿಯುಸಿ ಪಾಸಾದವರಿಗೆ ಭರ್ಜರಿ ಗುಡ್‌ನ್ಯೂಸ್ ಇಲ್ಲಿದೆ. ಪಿಯುಸಿ ಬಳಿಕ ಉದ್ಯೋಗದ ಬೆನ್ನತ್ತಿರುವವರಿಗೆ ಹಾಗೆಯೇ ಪಿಯುಸಿ (puc) ನಂತರ ಆರ್ಥಿಕ ಸಮಸ್ಯೆಯಿಂದ ಓದು ಮುಂದುವರೆಸಲು ಸಾಧ್ಯವಾಗದೇ ಇದ್ದವರಿಗೆ ಸುವರ್ಣಾವಕಾಶ ಇಲ್ಲಿದೆ. ಕರ್ನಾಟಕ ರಾಜ್ಯ ಲೆಕ್ಕ ಪರಿಶೋಧನೆ ಮತ್ತು ಲೆಕ್ಕ ಪತ್ರ ಇಲಾಖೆಯಲ್ಲಿನ ಉಳಿಕೆ ಮೂಲ ವೃಂದದ ಕಿರಿಯ ಲೆಕ್ಕ ಸಹಾಯಕರು( KPSC Junior account assistant )ಹುದ್ದೆಗಳನ್ನು ಭರ್ತಿ ಮಾಡಲು ಅಧಿಸೂಚನೆ ಬಿಡುಗಡೆ ಮಾಡಲಾಗಿದ್ದು, ಅರ್ಹ ಅಭ್ಯರ್ಥಿಗಳಿಗೆ ಅರ್ಜಿ ಆಹ್ವಾನಿಸಿದೆ (KPSC Recruitment). ಆಸಕ್ತ, ಅರ್ಹ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ.
ಹುದ್ದೆಯ ವಿವರ: ಹುದ್ದೆಯ ಹೆಸರು – ಕಿರಿಯ ಲೆಕ್ಕ ಸಹಾಯಕರು (Junior Account Assistant) ಹುದ್ದೆಗಳ ಸಂಖ್ಯೆ – 67
ಪ್ರಮುಖ ದಿನಾಂಕಗಳು: ಅರ್ಜಿ ಸಲ್ಲಿಸಲು ಆರಂಭಿಕ ದಿನಾಂಕ – 25/03/2023 ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ -25/04/2023 ಶುಲ್ಕವನ್ನು ಪಾವತಿಸಲು ಕೊನೆಯ ದಿನಾಂಕ -26/04/2023
ವಿದ್ಯಾರ್ಹತೆ – ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ದ್ವಿತೀಯ ಪಿಯುಸಿಯಲ್ಲಿ (second puc) ಕಾಮರ್ಸ್ (commerce) ವಿಭಾಗವನ್ನು ಆಯ್ಕೆ ಮಾಡಿಕೊಂಡು, ವಿದ್ಯಾಭ್ಯಾಸ ಪೂರ್ಣಗಳಿಸಿರಬೇಕು (ಅಕೌಂಟೆನ್ಸಿ ಐಚ್ಛಿಕ ವಿಷಯವಾಗಿ ಓದಿರಬೇಕು).
ಉದ್ಯೋಗ ವಿಧ : Full Time ವೇತನ : ರೂ. 21,400-42,000 ಉದ್ಯೋಗ ಸ್ಥಳ – ಬೆಂಗಳೂರು (Bengaluru)
ವಯೋಮಿತಿ: • ಕನಿಷ್ಠ 18 ವರ್ಷ • ಸಾಮಾನ್ಯ ಅರ್ಹತೆಯ ಅಭ್ಯರ್ಥಿಗಳಿಗೆ ಗರಿಷ್ಠ 35 ವರ್ಷ. • ಹಿಂದುಳಿದ ವರ್ಗದ ಅಭ್ಯರ್ಥಿಗಳಿಗೆ ಗರಿಷ್ಠ 38 ವರ್ಷ. • ಎಸ್‌ಸಿ, ಎಸ್‌ಟಿ, ಪ್ರವರ್ಗ-1 ಅಭ್ಯರ್ಥಿಗಳಿಗೆ ಗರಿಷ್ಠ 40 ವರ್ಷ.
ಅರ್ಜಿ ಶುಲ್ಕ : ಮಾಜಿ ಸೈನಿಕ ಅಭ್ಯರ್ಥಿಗಳಿಗೆ – ರೂ.50 ಇತರೆ ಹಿಂದುಳಿದ ವರ್ಗಗಳ ಅಭ್ಯರ್ಥಿಗಳಿಗೆ- ರೂ.300. ಜೆನೆರಲ್ ಕೆಟಗರಿ ಅಭ್ಯರ್ಥಿಗಳಿಗೆ – ರೂ.600. ಎಸ್‌ಸಿ, ಎಸ್‌ಟಿ, ಪ್ರವರ್ಗ-1 ಅಭ್ಯರ್ಥಿಗಳಿಗೆ ಅರ್ಜಿ ಶುಲ್ಕ ವಿನಾಯಿತಿ ಇರಲಿದೆ.
ಅರ್ಜಿ ಸಲ್ಲಿಸುವ ವಿಧಾನ: • ಪ್ರೊಫೈಲ್ ಕ್ರಿಯೇಟ್ ಮಾಡಬೇಕು. ಅಥವಾ ಅಪ್‌ಡೇಟ್ ಮಾಡಬೇಕು. • ನಂತರ ಅಪ್ಲಿಕೇಶನ್ ಸಬ್‌ಮಿಟ್ ಮಾಡಬೇಕು. • ಕೊನೆಗೆ ಅಪ್ಲಿಕೇಶನ್ ಶುಲ್ಕ ಪಾವತಿ ಮಾಡಬೇಕು.
ಪರೀಕ್ಷಾ ದಿನಾಂಕವನ್ನು ಮುಂದಿನ ದಿನಗಳಲ್ಲಿ ಪ್ರಕಟಿಸಲಾಗುವುದು ಎಂದು ಹೇಳಲಾಗಿದೆ. ಹೆಚ್ಚಿನ ಮಾಹಿತಿಗೆ ವೆಬ್‌ಸೈಟ್ https://www.kpsc.kar.nic.in/index.html ಗೆ ಭೇಟಿ ನೀಡಿ.
ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.
© 2021 Suddi Sanchalana. All Rights Reserved.