logo
WhatsApp Image 2026-04-02 at 14.46.04.jpeg
hindalco everlast.jpeg

ಕರಾವಳಿ, ಮಲೆನಾಡಿನಲ್ಲಿ ಜೂ. 6 ರ ವರೆಗೆ ಸುರಿಯಲಿದೆ ಭಾರೀ ಮಳೆ,ಗಾಳಿ: ಹವಾಮಾನ ಇಲಾಖೆ ಮುನ್ಸೂಚನೆ

ಟ್ರೆಂಡಿಂಗ್
share whatsappshare facebookshare telegram
1 Jul 2026
post image

ಬೆಂಗಳೂರು: ರಾಜ್ಯದ ಕರಾವಳಿ ಹಾಗೂ ಮಲೆನಾಡು ಭಾಗಗಳಲ್ಲಿ ಕಳೆದ ಎರಡು ದಿನಗಳಿಂದ ಧಾರಾಕಾರ ಮಳೆಯಾಗುತ್ತಿದ್ದು, ಜನಜೀವನ ಅಸ್ತವ್ಯಸ್ತಗೊಂಡಿದೆ. ಮುಂದಿನ ಎರಡು ದಿನಗಳ ಕಾಲವೂ ಮಳೆಯ ಆರ್ಭಟ ಮುಂದುವರಿಯುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಮಳೆಯ ತೀವ್ರತೆಯನ್ನು ಗಮನದಲ್ಲಿಟ್ಟುಕೊಂಡು ಉತ್ತರ ಕನ್ನಡ, ಉಡುಪಿ, ದಕ್ಷಿಣ ಕನ್ನಡ, ಶಿವಮೊಗ್ಗ, ಚಿಕ್ಕಮಗಳೂರು ಹಾಗೂ ಹಾಸನ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ಬೆಳಗಾವಿ, ಧಾರವಾಡ, ಗದಗ ಮತ್ತು ಹಾವೇರಿ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ನೀಡಲಾಗಿದೆ. ಬೆಂಗಳೂರು ಸೇರಿದಂತೆ ರಾಜ್ಯದ ಉಳಿದ ಜಿಲ್ಲೆಗಳಲ್ಲೂ ಸಾಧಾರಣದಿಂದ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಇಲಾಖೆ ತಿಳಿಸಿದೆ.

ಜುಲೈ 6ರವರೆಗೆ ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉಡುಪಿ ಹಾಗೂ ಉತ್ತರ ಕನ್ನಡ ಜಿಲ್ಲೆಗಳಲ್ಲಿ ಮಿಂಚು-ಗುಡುಗು ಸಹಿತ ಭಾರೀ ಮಳೆಯಾಗುವ ಸಾಧ್ಯತೆ ಇರುವ ಹಿನ್ನೆಲೆಯಲ್ಲಿ ಆರೆಂಜ್ ಅಲರ್ಟ್ ಮುಂದುವರಿಸಲಾಗಿದೆ. ಕರಾವಳಿ ಪ್ರದೇಶಗಳಿಗೆ ಪ್ರವಾಸಿಗರ ಸಂಚಾರ ಹೆಚ್ಚಿರುವುದರಿಂದ ಅಗತ್ಯ ಮುನ್ನೆಚ್ಚರಿಕೆ ವಹಿಸುವಂತೆ ಅಧಿಕಾರಿಗಳು ಸೂಚಿಸಿದ್ದಾರೆ.

ಇದೇ ವೇಳೆ, ಕೆಲವೆಡೆ ಗಂಟೆಗೆ 30ರಿಂದ 40 ಕಿಲೋಮೀಟರ್ ವೇಗದಲ್ಲಿ ಗಾಳಿ ಬೀಸುವ ಸಾಧ್ಯತೆ ಇದ್ದು, ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಚಿಕ್ಕಮಗಳೂರು ಮತ್ತು ಶಿವಮೊಗ್ಗ ಜಿಲ್ಲೆಗಳ ನಿವಾಸಿಗಳು ಎಚ್ಚರಿಕೆಯಿಂದ ಇರುವಂತೆ ಸೂಚಿಸಲಾಗಿದೆ.

ಮೀನುಗಾರರು ಸಮುದ್ರಕ್ಕೆ ತೆರಳದಂತೆ ಹಾಗೂ ಸಾರ್ವಜನಿಕರು ಸಮುದ್ರ, ನದಿಗಳು ಮತ್ತು ಇತರೆ ಜಲಾಶಯಗಳಿಗೆ ಇಳಿಯದಂತೆ ಹವಾಮಾನ ಇಲಾಖೆ ಕಟ್ಟುನಿಟ್ಟಿನ ಎಚ್ಚರಿಕೆ ನೀಡಿದೆ.

WhatsApp Image 2026-06-24 at 10.46.16 PM.jpeg
WhatsApp Image 2026-06-24 at 10.51.40 PM.jpeg
IMG_5455.jpg.jpeg
Aadya 26.jpg.jpeg
WhatsApp Image 2025-03-24 at 6.54.49 AM.jpeg
About Us

ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.

9900402699, 7899167180

© 2021 Suddi Sanchalana. All Rights Reserved.