logo
WhatsApp Image 2026-04-02 at 14.46.04.jpeg
hindalco everlast.jpeg

ಜೂ.1 ರಿಂದ ಜು.31: ಯಾಂತ್ರೀಕೃತ ಮೀನುಗಾರಿಕೆ ನಿಷೇಧ..!

ಟ್ರೆಂಡಿಂಗ್
share whatsappshare facebookshare telegram
28 May 2024
post image

ಉಡುಪಿ, ಮೇ.29: ಪ್ರಸಕ್ತ ಸಾಲಿನ ಮಳೆಗಾಲದ ಅವಧಿಯಲ್ಲಿ ಉಡುಪಿ ಜಿಲ್ಲೆಯೂ ಸೇರಿದಂತೆ ಕರ್ನಾಟಕ ಕರಾವಳಿಯಲ್ಲಿ ಯಾವುದೇ ಬಲೆಗಳನ್ನು / ಸಾಧನಗಳನ್ನು ಉಪಯೋಗಿಸಿ ಮೀನುಗಾರಿಕೆಗಾಗಿ ಯಾಂತ್ರೀಕೃತ ದೋಣಿಗಳ ಮತ್ತು 10 ಅಶ್ವಶಕ್ತಿ (ಹೆಚ್.ಪಿ) ಸಾಮರ್ಥ್ಯಕ್ಕಿಂತ ಮೇಲ್ಪಟ್ಟ ಇನ್‌ಬೋರ್ಡ್ ಅಥವಾ ಔಟ್‌ಬೋರ್ಡ್ ಯಂತ್ರಗಳನ್ನು ಅಳವಡಿಸಿರುವ ಸಾಂಪ್ರದಾಯಿಕ ದೋಣಿಗಳ ಮುಖಾಂತರ ಕೈಗೊಳ್ಳುವ ಮೀನುಗಾರಿಕೆ ಚಟುವಟಿಕೆಯನ್ನು ಜೂನ್ 1 ರಿಂದ ಜುಲೈ 31 ರವರೆಗೆ ಒಟ್ಟು 61 ದಿನಗಳ ನಿಷೇಧವನ್ನು ಹೇರಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.

ದೋಣಿಯನ್ನು ಸಾಗಿಸುವ ಉದ್ದೇಶಕ್ಕಾಗಿ 10 ಅಶ್ವಶಕ್ತಿಯ ವರೆಗಿನ ಸಾಮರ್ಥ್ಯದ ಮೋಟರೀಕೃತ ದೋಣಿ ಹಾಗೂ ಸಾಂಪ್ರದಾಯಕ/ ನಾಡದೋಣಿಗಳು ಕರಾವಳಿ ಮೀನುಗಾರಿಕೆಯನ್ನು ಕೈಗೊಳ್ಳಲು ಅನುಮತಿ ನೀಡಲಾಗಿದೆ.

ಆದೇಶವನ್ನು ಉಲ್ಲಂಘಿಸಿದರೆ ದಂಡ:

ಮೀನುಗಾರಿಕೆ ನಿಷೇಧಿಸಿದ ಸರಕಾರಿ ಆದೇಶವನ್ನು ಉಲ್ಲಂಘಿಸುವ ಮೀನುಗಾರಿಕಾ ದೋಣಿಗಳು ಮತ್ತು ಮೀನುಗಾರರು ಕರ್ನಾಟಕ ಕಡಲ ಮೀನುಗಾರಿಕೆ ಕಾಯ್ದೆ 1986 ರಲ್ಲಿ ವಿಧಿಸಲಾಗಿರುವ ದಂಡನೆಗಳಿಗೆ ಹೊಣೆಯಾಗುವುದಲ್ಲದೇ, ಒಂದು ವರ್ಷದ ಅವಧಿಗೆ ಡೆಲಿವರಿ ಪಾಯಿಂಟ್‌ನಲ್ಲಿ ರಾಜ್ಯ ಮಾರಾಟಕರ ರಹಿತ ಡೀಸಿಲ್ ಪಡೆಯಲು ಅನರ್ಹರಾಗುತ್ತಾರೆ.

ಈ ಆದೇಶವನ್ನು ಕರಾವಳಿ ಪ್ರದೇಶದ ಎಲ್ಲಾ ಮೀನುಗಾರರು ಪಾಲಿಸಿ, ಸರಕಾರದೊಂದಿಗೆ ಸಹಕರಿಸುವಂತೆ ಮೀನುಗಾರಿಕಾ ಇಲಾಖೆಯ ಜಂಟಿ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Aadya 26.jpg.jpeg
WhatsApp Image 2025-03-24 at 6.54.49 AM.jpeg
About Us

ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.

9900402699, 7899167180

© 2021 Suddi Sanchalana. All Rights Reserved.