



ಉಡುಪಿ: ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ಉಡುಪಿ, ಜಿಲ್ಲಾಡಳಿತ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಸಾರ್ವಜನಿಕ ಶಿಕ್ಷಣ ಇಲಾಖೆ ಹಾಗೂ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಉಡುಪಿ ಇವರ ಸಹಯೋಗದಲ್ಲಿ , ವಿಶ್ವ ಪರಿಸರ ದಿನಾಚರಣೆಯ ಅಂಗವಾಗಿ ಪರಿಸರ ಜಾಥಾ ಮತ್ತು ಸಭಾ ಕಾರ್ಯಕ್ರಮವು ಜೂನ್ 5 ರಂದು ಬೆಳಗ್ಗೆ 10 ಗಂಟೆಗೆ ರಜತಾದ್ರಿಯ ಅಟಲ್ ಬಿಹಾರಿ ವಾಜಪೇಯಿ ಸಭಾಂಗಣದಲ್ಲಿ ನಡೆಯಲಿದೆ.
ಕಾರ್ಯಕ್ರಮವನ್ನು ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಅಧ್ಯಕ್ಷ ಶಾಂತವೀರ ಶಿವಪ್ಪ ಉದ್ಘಾಟಿಸಲಿದ್ದು, ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ. ಅಧ್ಯಕ್ಷತೆ ವಹಿಸಲಿದ್ದಾರೆ.
ಕಾರ್ಯಕ್ರಮದಲ್ಲಿ ಜಿಲ್ಲಾ ಪಂಚಾಯತ್‌ನ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಪ್ರಸನ್ನ ಹೆಚ್, ಜಿಲ್ಲಾ ಪೊಲೀಸ್ ಅಧೀಕ್ಷಕ ಅಕ್ಷಯ್ ಹಾಕೆ ಮಚ್ಚಿಂದ್ರ, ಹಿರಿಯ ಸಿವಿಲ್ ನ್ಯಾಯಾಧೀಶೆ ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಶರ್ಮಿಳಾ ಎಸ್, ಹಿರಿಯ ಪರಿಸರ ಅಧಿಕಾರಿ ವಿಜಯ ಹೆಗಡೆ, ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯ ಉಪನಿರ್ದೇಶಕ ಗಣಪತಿ ಕೆ, ಜಿಲ್ಲಾ ಸ್ಕೌಟ್ಸ್ ಮತ್ತು ಗೈಡ್ಸ್ನ ಆಯುಕ್ತ ಡಾ.ವಿಜಯೇಂದ್ರ ವಸಂತ ರಾವ್ ಮತ್ತಿತರರು ಭಾಗವಹಿಸಲಿರುವರು.
ಕಾರ್ಯಕ್ರಮದ ಅಂಗವಾಗಿ ಬೆಳಗ್ಗೆ 7:30 ಕ್ಕೆ ಮಣಿಪಾಲ ಎಂ.ಜೆ.ಸಿ.ಕಾಲೇಜು ಮೈದಾನದಿಂದ ರಜತಾದ್ರಿಯ ವಾಜಪೇಯಿ ಸಭಾಂಗಣದವರೆಗೆ ಜಾಥಾ ನಡೆಯಲಿದೆ.
ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.
© 2021 Suddi Sanchalana. All Rights Reserved.