



ಮಂಗಳೂರು::
ದಕ್ಷಿಣ ಕನ್ನಡ ಜಿಲ್ಲಾ ಕ್ರೀಡಾಂಗಣದಲ್ಲಿ ಕಬಡ್ಡಿಗೆ ಉತ್ತೇಜನ ನೀಡುವ ನಿಟ್ಟಿನಲ್ಲಿ ಬಾಲಕ - ಬಾಲಕಿಯರ ಕ್ರೀಡಾ ವಸತಿ ನಿಲಯ ಮಾಡುವಂತೆ ಯುವ ಸಬಲೀಕರಣ ಮತ್ತು ಕ್ರೀಡಾ ಸಚಿವ
ನಾರಾಯಣ ಗೌಡ ಅವರಿಗೆ ಶಾಸಕ ವೇದವ್ಯಾಸ್ ಕಾಮತ್ ಮನವಿ ಸಲ್ಲಿಸಿದರು.
ದಕ್ಷಿಣ ಕನ್ನಡ ಜಿಲ್ಲೆಯ ಅನೇಕ ಪ್ರತಿಭಾನ್ವಿತ ಕಬಡ್ಡಿ ಪಟುಗಳು ರಾಜ್ಯ,ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಮಟ್ಟದಲ್ಲಿ ಬೆಳಗಿ ರಾಜ್ಯ ಹಾಗೂ ರಾಷ್ಟ್ರಕ್ಕೆ ಕೀರ್ತಿ ತಂದಿದ್ದಾರೆ. ಆದರೆ ನಮ್ಮ ಜಿಲ್ಲಾ ಕ್ರೀಡಾ ವಸತಿ ನಿಲಯದಲ್ಲಿ ಕಬಡ್ಡಿಗೆ ಸಂಬಂಧಿಸಿದ ಯಾವುದೇ ಮಕ್ಕಳ ಸೇರ್ಪಡೆಯಾಗಿಲ್ಲ. ಹಾಗಾಗಿ
ದಕ್ಷಿಣ ಕನ್ನಡ ಜಿಲ್ಲಾ ಕ್ರೀಡಾಂಗಣದಲ್ಲಿ ಕಬಡ್ಡಿಯ ಬಾಲಕ - ಬಾಲಕಿಯರ ಕ್ರೀಡಾ ವಸತಿ ನಿಲಯ ಮಾಡುವಂತೆ ಸಚಿವರಿಗೆ ಮನವಿಯಲ್ಲಿ ಒತ್ತಾಯಿಸಿದರು.
ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.
© 2021 Suddi Sanchalana. All Rights Reserved.