logo
WhatsApp Image 2026-04-02 at 14.46.04.jpeg
hindalco everlast.jpeg

ಕಲ್ಯಾ: ಮನೆಯ ಬಾಗಿಲು ಮುರಿದು ಲಕ್ಷಾಂತರ ರೂ. ಮೌಲ್ಯದ ಚಿನ್ನಾಭರಣ ಕಳವು

ಟ್ರೆಂಡಿಂಗ್
share whatsappshare facebookshare telegram
4 Dec 2022
post image

ಕಾರ್ಕಳ: ಮನೆಯ ಅಡುಗೆ ಮನೆಯ ಬಾಗಿಲು ಮುರಿದು ಒಳನುಗ್ಗಿದ ಕಳ್ಳರು ಮನೆಯ ಗೋದ್ರೆಜ್ ನಲ್ಲಿ ಇರಿಸಿದ್ದ ಲಕ್ಷಾಂತರ ರೂ. ಮೌಲ್ಯದ ಚಿನ್ನಾಭರಣ ಕಳವು ಮಾಡಿಕೊಂಡು ಹೋಗಿರುವ ಘಟನೆ ಕಾರ್ಕಳ ತಾಲೂಕು ಕಲ್ಯಾ ಗ್ರಾಮದ ಕಂಗಿತ್ಲು ಡಿ.3ರಂದು ರಾತ್ರಿ ನಡೆದಿದೆ. ಕಲ್ಯಾ ಗ್ರಾಮದ ಕಂಗಿತ್ಲು ನಿವಾಸಿ ಉಷಾ ಎಂಬವರ ಮನೆಯಲ್ಲಿ ಕಳ್ಳತನ ನಡೆದಿದ್ದು, ನಿನ್ನೆ ರಾತ್ರಿ ಯಾರೋ ಕಳ್ಳರು ಉಷಾ ಅವರ ಮನೆಯ ಅಡುಗೆ ಕೋಣೆಯ ಬಾಗಿಲಿನ ಬೀಗ ಮುರಿದು ಮನೆಯೊಳಗೆ ಪ್ರವೇಶಿಸಿದ್ದಾರೆ. ಬಳಿಕ ಮನೆಯ ಕೊಠಡಿಯಲ್ಲಿದ್ದ ಗೋದ್ರೆಜ್ ನಲ್ಲಿ ಇರಿಸಿದ್ದ ಸುಮಾರು 4.50 ಲಕ್ಷ ರೂ. ಮೌಲ್ಯದ ಸುಮಾರು 156 ಗ್ರಾಂ ತೂಕದ ಬಂಗಾರದ ಒಡವೆಗಳನ್ನು ಕಳವು ಮಾಡಿಕೊಂಡು ಹೋಗಿದ್ದಾರೆ ಎಂದು ದೂರಿನಲ್ಲಿ ತಿಳಿಸಲಾಗಿದೆ. ಈ ಬಗ್ಗೆ ಕಾರ್ಕಳ ಗ್ರಾಮಾಂತರ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Aadya 26.jpg.jpeg
WhatsApp Image 2025-03-24 at 6.54.49 AM.jpeg
About Us

ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.

9900402699, 7899167180

© 2021 Suddi Sanchalana. All Rights Reserved.