



ಉಡುಪಿ: ಉಡುಪಿ ಜಿಲ್ಲೆಯ ಕುಂದಾಪುರ ತಾಲೂಕಿನ ಶ್ರೀ ಕ್ಷೇತ್ರ ಕಮಲಶಿಲೆ, ಶ್ರೀ ಬ್ರಾಹ್ಮಿ ದುರ್ಗಾಪರಮೇಶ್ವರೀ ಅಮ್ಮನವರ ದೇವಸ್ಥಾನದಲ್ಲಿ ಸೆ.22 ರಿಂದ ಅ.02ರ ವರೆಗೆ ಶ್ರೀ ಬ್ರಾಹ್ಮಿ ದುರ್ಗಾಪರಮೇಶ್ವರೀ ಅಮ್ಮನವರ ಸನ್ನಿಧಿಯಲ್ಲಿ ಶರನ್ನವರಾತ್ರಿ ಮಹೋತ್ಸವ ನಡೆಯುತ್ತಿದೆ.
ಅ.01, ಬುಧವಾರ ನವಮಿಯಂದು ಮಧ್ಯಾಹ್ನ ಶ್ರೀ ಚಂಡಿಕಾ ಯಾಗ, ರಾತ್ರಿ ರಜತ ರಥೋತ್ಸವ ಮತ್ತು ಪುಷ್ಪಕವಾಹನದಲ್ಲಿ ಪುರಮೆರವಣಿಗೆ (ರಥಬೀದಿ ಮತ್ತು ರಾಜಬೀದಿ) ನಡೆಯಲಿದ್ದು, ಅ.02 ರಂದು ಉದಯಪೂರ್ವ 6-05 ಗಂಟೆಗೆ ಕದಿರು ಮುಹೂರ್ತ, ಧಾನ್ಯ ಸಂಗ್ರಹ ಕಣಜ ತುಂಬಿಸುವುದು, ಶಮೀ ಪೂಜೆ ಮತ್ತು ಸಂಜೆ ವಿಜಯೋತ್ಸವ ನಡೆಯಲಿರುವುದು.
ಸಂಜೆ 7-00 ಗಂಟೆಗೆ ಮಹಾಮಂಗಳಾರತಿ ಪ್ರತಿದಿನ ಸಂಜೆ 5-30 ಗಂಟೆಯಿಂದ 7-15 ಗಂಟೆಯವರೆಗೆ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳು ಹಾಗೂ ವಿವಿಧ ಭಜನಾ ಮಂಡಳಿಯವರಿಂದ ಭಜನಾ ಕಾರ್ಯಕ್ರಮ ನಡೆಯಲಿದೆ.
ಈ ಕ್ಷೇತ್ರಕ್ಕೆ ತಾವೆಲ್ಲರೂ ತಮ್ಮ ಇಷ್ಟಮಿತ್ರ, ಬಂಧು-ಬಾಂಧವರೊಡಗೂಡಿ ಆಗಮಿಸಿ, ಶ್ರೀ ಸನ್ನಿಧಿಯಲ್ಲಿ ನಡೆಯುವ ಪೂಜಾ ಉತ್ಸವ ಕಾರ್ಯಕ್ರಮಗಳನ್ನು ವೀಕ್ಷಿಸಿ, ಈ ಪ್ರಸನ್ನ ಕಾಲದಲ್ಲಿ ಶ್ರೀ ಮುಡಿ ಗಂಧ ಪ್ರಸಾದಗಳನ್ನು ಸ್ವೀಕರಿಸಿ, ಶ್ರೀ ಬ್ರಾಹ್ಮಿ ದುರ್ಗಾಪರಮೇಶ್ವರೀ ಅಮ್ಮನವರ ಸಂಪೂರ್ಣ ಕೃಪೆಗೆ ಪಾತ್ರರಾಗಬೇಕಾಗಿ ಅಪೇಕ್ಷಿಸುವ,
-ಶೆಟ್ಟಿಪಾಲು ಸಚ್ಚಿದಾನಂದ ಚಾತ್ರ ಅನುವಂಶಿಕ ಆಡಳಿತ ಮೊಕ್ತೇಸರರು
-ಆಜಿ ಚಂದ್ರಶೇಖರ ಶೆಟ್ಟಿ ಅನುವಂಶಿಕ ಜೊತೆ ಮೊಕ್ತೇಸರರು
ವಿಶೇಷ ಸೂಚನೆ: ಪ್ರತಿದಿನ ಮಧ್ಯಾಹ್ನ ಮತ್ತು ರಾತ್ರಿ ಬಂದ ಭಕ್ತರಿಗೆ ಊಟದ ವ್ಯವಸ್ಥೆ ಇದೆ. ಪ್ರತಿದಿನ ರಾತ್ರಿ ಉತ್ಸವದ ನಂತರ ಸಿದ್ದಾಪುರ ಹಾಗೂ ಹಳ್ಳಿಹೊಳೆ ಕಡೆ ಹೋಗುವವರಿಗೆ ಬಸ್ಸಿನ ವ್ಯವಸ್ಥೆ ಇದೆ. ಪ್ರತಿದಿನ ಮಧ್ಯಾಹ್ನ ಚಂಡಿಕಾ ಯಾಗ ಮತ್ತು ಸಂಜೆ ಶ್ರೀ ರಂಗ ಪೂಜಾ ಮತ್ತು ರಾತ್ರಿ ಬೆಳ್ಳಿ ರಥೋತ್ಸವ ಸೇವೆ ಹಾಗೂ ಅನ್ನ ಸಂತರ್ಪಣೆ ಸೇವೆ ಇರುವುದು. ಶ್ರೀ ಕ್ಷೇತ್ರ ಕಮಲಶಿಲೆ ದಶಾವತಾರ ಯಕ್ಷಗಾನ ಮೇಳದ 2025-26ನೇ ಸಾಲಿನ ತಿರುಗಾಟವನ್ನು ಶ್ರೀ ದೇವಳದ ವತಿಯಿಂದ ನಡೆಸುತ್ತಿದ್ದು 2025-26ರ ಎಲ್ಲಾ ಆಟವೂ ಬುಕ್ಕಿಂಗ್ ಆಗಿರುತ್ತದೆ. ಆಟ ಆಡಿಸುವ ಭಕ್ತಾದಿಗಳು 2026-27ರ ಸಾಲಿನ ಆಟ ಒಂದರ ರೂ.5000.00ನ್ನು ಎಡ್ವಾನ್ಸ್ ಕೊಟ್ಟು ದೇವಳದ ಕಛೇರಿಯಲ್ಲಿ ತಮ್ಮ ಆಟದ ದಿನಾಂಕವನ್ನು ನಿಗದಿಪಡಿಸಿಕೊಳ್ಳುವುದು. A/c. Name: Shri Brahmi Durgaparameshwari Temple Union Bank of India, Kamalashile Branch A/c No.: 520101028096270 IFSC Code: UBIN0930601 Bank: Siddapura Branch
A/c No.: 7062500100096001 IFSC Code: KARB0000706 Bank: Canara Bank, Siddapura Branch A/c No.: 6147101000002 IFSC Code: CNRB0006147
ಹೆಚ್ಚಿನ ಮಾಹಿತಿಗಾಗಿ ಸಂಪರ್ಕಿಸಿ: 9591560809, 7022449830
ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.
© 2021 Suddi Sanchalana. All Rights Reserved.