



ಕುಂದಾಪುರ:
ಅನಾರೋಗ್ಯದಿಂದ ಬಳಲುತ್ತಿದ್ದ ಮಹಿಳೆಯೊಬ್ಬರು ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಕುಂದಾಪುರ ತಾಲೂಕಿನ ಕಂದಾವರ ಗ್ರಾಮದಲ್ಲಿ ಫೆ.2ರಂದು ಬೆಳಕಿಗೆ ಬಂದಿದೆ. ಕಂದಾವರ ಗ್ರಾಮದ ಮೂಡ್ಲಕಟ್ಟೆ ನಿವಾಸಿ ಜಗದೀಶ್ ಅವರ ಪತ್ನಿ 42ವರ್ಷದ ಜಯಂತಿ ಆತ್ಮಹತ್ಯೆ ಮಾಡಿಕೊಂಡ ಮಹಿಳೆ. ಇವರು ಕಳೆದ 2 ವರ್ಷದಿಂದ ಕ್ಯಾನ್ಸರ್ ನಿಂದ ಬಳಲುತ್ತಿದ್ದರು. ಇದೇ ಚಿಂತೆಯಲ್ಲಿ ಮನನೊಂದು ಫೆ.1ರ ರಾತ್ರಿ 11.30ರಿಂದ ಫೆ. 2ರ ಬೆಳಿಗ್ಗೆ 5.30ರ ಮಧ್ಯಾವಧಿಯಲ್ಲಿ ಮನೆಯ ಛಾವಡಿಯ ಮಾಡಿನ ಪಕ್ಕಾಸಿಗೆ ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಈ ಬಗ್ಗೆ ಕುಂದಾಪುರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.
© 2021 Suddi Sanchalana. All Rights Reserved.