



ಸ್ಯಾಂಡಲ್‌ವುಡ್ ನಟ ಹಾಗೂ ನಿರ್ದೇಶಕ ಟಪೋರಿ ಸತ್ಯ (45) ಏ.23ರ ಭಾನುವಾರದಂದು ನಿಧನರಾಗಿದ್ದಾರೆ. ಅನಾರೋಗ್ಯದಿಂದ ಬಳಲುತ್ತಿದ್ದ ಇವರು ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೇ ಕೊನೆಯುಸಿರೆಳೆದರು.
ಶ್ವಾಸಕೋಶದ ಸಮಸ್ಯೆಯಿಂದ ಬಳಲುತ್ತಿದ್ದ ಟಪೋರಿ ಸತ್ಯ ಅವರನ್ನುಆಸ್ಪತ್ರೆಗೆ ದಾಖಲಿಸಲಾಗಿತ್ತು. ಕಳೆದ ಒಂದು ವಾರದಿಂದ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ ಚಿಕಿತ್ಸೆ ಫಲಿಸದೇ ಮೃತಪಟ್ಟಿದ್ದಾರೆ. ಪತ್ನಿ, ಮೂವರು ಹೆಣ್ಣುಮಕ್ಕಳನ್ನ ಅಗಲಿದ್ದಾರೆ.
ಟಪೋರಿ ಸತ್ಯ ಅವರು ಮನೆಗೆ ಆಧಾರವಾಗಿದ್ದರು. ಅವರ ನಿಧನದಿಂದ ಕುಟುಂಬಸ್ಥರು ಆಘಾತಕ್ಕೆ ಒಳಗಾಗಿದ್ದಾರೆ. ಬನಶಂಕರಿ ಮೂರನೇ ಹಂತದಲ್ಲಿ ಇರುವ ನಿವಾಸದಲ್ಲಿ ಪಾರ್ಥಿವ ಶರೀರದ ಅಂತಿಮ ದರ್ಶನಕ್ಕೆ ಅವಕಾಶ ಕಲ್ಪಿಸಲಾಗಿದೆ.
ಟಪೋರಿ ಸತ್ಯ ಅವರು ನಂದ ಲವ್ಸ್ ನಂದಿತಾ ಸಿನಿಮಾ ಸೇರಿದಂತೆ 30ಕ್ಕೂ ಹೆಚ್ಚು ಸಿನಿಮಾಗಳಲ್ಲಿ ನಟಿಸಿದ್ದಾರೆ. ಅಲ್ಲದೇ ‘ಮೇಳ’ ಎನ್ನುವ ಸಿನಿಮಾವನ್ನು ನಿರ್ದೇಶನ ಮಾಡಿದ್ದಾರೆ.
ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.
© 2021 Suddi Sanchalana. All Rights Reserved.