logo
WhatsApp Image 2026-04-02 at 14.46.04.jpeg
hindalco everlast.jpeg

ಅಮೇರಿಕದಲ್ಲಿ ಕನ್ನಡ ಸಾಹಿತ್ಯ ಚಟುವಟಿಕೆ ನಿರಂತರ~ ಶಶಿಕಲಾ ಚಂದ್ರಶೇಖರ್

ಟ್ರೆಂಡಿಂಗ್
share whatsappshare facebookshare telegram
11 Mar 2023
post image

ಕನ್ನಡ ಸಾಹಿತ್ಯ ಪರಿಷತ್ತು ಉಡುಪಿ ಜಿಲ್ಲೆ ಉಡುಪಿ ತಾಲೂಕು ಘಟಕ ದಿಂದ ಅಮೇರಿಕಾ ಕನ್ನಡ ಸಾಹಿತ್ಯ ರಂಗ ಸಂಸ್ಥೆಯ ಶಶಿಕಲಾ ಚಂದ್ರಶೇಖರ್ ಅವರೊಂದಿಗೆ ಮಾತುಕತೆ ಕಾರ್ಯಕ್ರಮವು ಉಡುಪಿಯ ಕೊಡವೂರಿನ ಭಾಮ ಆರ್ಟ್ ಗ್ಯಾಲರಿಯಲ್ಲಿ ನಡೆಯಿತು .

ಶಶಿಕಲಾ ಚಂದ್ರಶೇಖರ್ ಮಾತನಾಡಿ ಕಲೆ, ಸಂಸ್ಕೃತಿ ಮತ್ತು ಕನ್ನಡ ಸಾಹಿತ್ಯದ ಕುರಿತಾದ ಹಲವು ಕಾರ್ಯಕ್ರಮಗಳು ನಿರಂತರವಾಗಿ ಅಮೆರಿಕದಲ್ಲಿ ನಡೆಯುತ್ತಿದ್ದು, ಇತ್ತೀಚಿನ ದಿನಗಳಲ್ಲಿ ಇನ್ನಷ್ಟು ಹೆಚ್ಚು ಕನ್ನಡ ಸಾಹಿತ್ಯ ಚಟುವಟಿಕೆಗಳು ನಿರಂತರವಾಗಿ ನಡೆಯುತ್ತಿದೆ ಎಂದರು.

ಪ್ರಸಿದ್ಧ ಸಾಹಿತಿ ವೈದೇಹಿಯವರು ತಾವು ಅಮೆರಿಕಕ್ಕೆ ಹೋದ ಸಂದರ್ಭದಲ್ಲಿ ಸಾಹಿತ್ಯ ಕಾರ್ಯಕ್ರಮದ ಅನುಭವಗಳನ್ನು ಹಂಚಿಕೊಂಡರು. ಕಾರ್ಯಕ್ರಮವನ್ನು ಕವಯಿತ್ರಿ ಜ್ಯೋತಿ ಮಹದೇವ್ ನಡೆಸಿಕೊಟ್ಟರು.

ಈ ಸಂದರ್ಭದಲ್ಲಿ ಸಾಹಿತಿ ಶಶಿಕಲಾ ಚಂದ್ರಶೇಖರ್ ರವರನ್ನು ಕಸಾಪ ವತಿಯಿಂದ ಗೌರವಿಸಿ, ಅಭಿನಂದಿಸಲಾಯಿತು.

ಇದೇ ಸಂದರ್ಭದಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ಉಡುಪಿ ಜಿಲ್ಲಾಧ್ಯಕ್ಷ ನೀಲಾವರ ಸುರೇಂದ್ರ ಅಡಿಗ, ಶ್ರೀನಿವಾಸ್ ಮೂರ್ತಿ, ಸಾಹಿತಿಗಳಾದ ಡಾ| ಕಾತ್ಯಾಯಿನಿ ಕುಂಜಿಬೆಟ್ಟು, ಪೂರ್ಣಿಮಾ ಜನಾರ್ದನ್ ,ಪೂರ್ಣಿಮಾ ಸುರೇಶ್ ನಾರಾಯಣ ಮಡಿ, ಸಾಹಿತ್ಯ ಪರಿಷತ್ತಿನ ಸದಸ್ಯರಾದ ನರಸಿಂಹಮೂರ್ತಿ, ಸತೀಶ್ ಕೊಡವೂರು, ಈರಣ್ಣ ಕುರುವತ್ತಿ ಗೌಡ ಇನ್ನಿತರರು ಉಪಸ್ಥಿತರಿದ್ದರು. ಸಾಹಿತ್ಯ ಪರಿಷತ್ತಿನ ಉಡುಪಿ ತಾಲೂಕು ಘಟಕದ ಅಧ್ಯಕ್ಷ ರವಿರಾಜ್ ಎಚ .ಪಿ ಪ್ರಸ್ತಾವಿಕ ಮಾತನಾಡಿ ಸ್ವಾಗತಿಸಿದರು, ಗೌರವ ಕಾರ್ಯದರ್ಶಿ ಜನಾರ್ಧನ್ ಕೊಡವೂರು ವಂದಿಸಿದರು

Aadya 26.jpg.jpeg
WhatsApp Image 2025-03-24 at 6.54.49 AM.jpeg
About Us

ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.

9900402699, 7899167180

© 2021 Suddi Sanchalana. All Rights Reserved.