



ಬೆಂಗಳೂರು: ಕೊಪ್ಪಳ ವಿಶ್ವವಿದ್ಯಾಲಯದ ಕುಲಪತಿಗಳಾದ ಪ್ರೊ. ಬಿ.ಕೆ.ರವಿಯವರು ರಾಷ್ಟ್ರೀಯ ಸಂವಹನ ಕಾಂಗ್ರೆಸ್ ನ ಕಾರ್ಯಕಾರಿ ಅಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ.
ದೇಶದ ಮಾಧ್ಯಮ ವಿದ್ವಾಂಸರು, ಸಂವಹನ ತಜ್ಞರು, ಮಾಧ್ಯಮ ಶಿಕ್ಷಕರು, ಸಂಶೋಧಕರು ಮತ್ತು ಭಾರತೀಯ ಮಾಧ್ಯಮದ ವೃತ್ತಿಪರರನ್ನು ಒಳಗೊಂಡಿರುವ ರಾಷ್ಟ್ರೀಯ ಸಂವಹನ ಕಾಂಗ್ರೆಸ್, ರಾಷ್ಟ್ರದಾದ್ಯಂತ ಮಾಧ್ಯಮಕ್ಕೆ ಸಂಬಂಧಿಸಿದ ವಿಚಾರ ಸಂಕಿರಣಗಳು, ಸಮ್ಮೇಳನಗಳು, ಪ್ರಕಟಣೆಗಳು, ತರಬೇತಿ ಹಾಗೂ ಸಂಶೋಧನೆಗಳನ್ನು ನಡೆಸಲಿದೆ.
ಕನ್ನಡಿಗ ಬಿ.ಕೆ ರವಿಯವರು ಉನ್ನತ ಸಂಸ್ಥೆಯ ಕಾರ್ಯಕಾರಿ ಅಧ್ಯಕ್ಷರಾಗಿ ಆಯ್ಕೆಯಾಗಿರುವುದು ಕನ್ನಡಿಗರಿಗೆ ಹೆಮ್ಮೆಯ ವಿಷಯ.
ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.
© 2021 Suddi Sanchalana. All Rights Reserved.